ಬೈಂದೂರು: ಶಾಲಾ ಬಸ್-ಕಾರು ನಡುವೆ ಅಪಘಾತ - ತಪ್ಪಿದ ಇನ್ನೊಂದು ದುರಂತ

Source: s o news | By Arshad Koppa | Published on 29th June 2016, 7:05 AM | Coastal News | Incidents | Don't Miss |

ಬೈಂದೂರು, ಜೂ.28:ತ್ರಾಸಿಯಲ್ಲಿ ನಡೆದ ಶಾಲಾ ಮಕ್ಕಳ ವಾಹನ ದುರಂತ ಮಾಸುವ ಮುನ್ನವೇ ಮತ್ತೆ ಮತ್ತೆ ಶಾಲಾ ವಾಹನಗಳು ಅಪಘಾತಕ್ಕಿಡಾಗಿ  ಸಲ್ಪದರಲ್ಲಿ ಪಾರಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ .

ಶಿರೂರು ಸಮಿಪದ ಸುಂಕದಗುಂಡಿ ಕ್ರಾಸ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಗ್ರೀನ್ ವ್ಯಾಲಿ ಶಾಲೆಯ ಶಾಲಾ ಬಸ್ ಬರುತ್ತಿದ್ದಾಗ ಸಂದರ್ಭ ಮುಂಬದಿಯಿಂದ ಬಂದ ಕಾರೊಂದು ಶಾಲಾ ವಾಹನಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದ್ದು, ಘಟನೆಯಲ್ಲಿ ಶಾಲಾ ಮಕ್ಕಳಿಗೆ ಯಾವುದೇ ಹಾನಿ ಉಂಟಾಗಿಲ್ಲ. ಶಾಲಾ ವಾಹನದ ಮುಂಭಾಗಕ್ಕೆ ಸಲ್ಪ ಪ್ರಮಾಣದ ಹಾನಿಯಾಗಿದೆ.

ನಿನ್ನೆಉಡುಪಿಯ ಟ್ರಿನಿಟಿ ಶಾಲೆಯ ಶಾಲಾ ಬಸ್ ಇನ್ನೊಂದು ಶಾಲಾ ಬಸ್ಸಿಗೆ ಢಿಕ್ಕಿ ಹೊಡೆದರೂ ಬಸ್ಸು ಚಾಲಕನ ಜಾಗರೂಕತೆಯಿಂದಾಗಿ ಸಂಭಾವ್ಯ ದುರಂತ ಒಂದು ತಪ್ಪಿದೆ. ಶಾಲಾ ವಾಹನಗಳ ಅಪಘಾತಗಳು ಮರುಕಳಿಸುತ್ತಿರುವುದು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

Read These Next

ಕಾರವಾರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ. ಬಿಜೆಪಿಗೆ ಜೆಡಿಎಸ್ ಬೆಂಬಲ ಘೋಷಣೆ : ಆನಂದ ಅಸ್ನೋಟಿಕರ್.

ಕಾರವಾರ : ನವೆಂಬರ್ ಒಂದರಂದು ಕಾರವಾರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ. ಜೆ.ಡಿ.ಎಸ್.ನ ನಾಲ್ಕು ಮತ್ತು ...

ಹಳೆಯ ವೈಷಮ್ಯ; ವ್ಯಕ್ತಿಯ ಕೊಲೆ  

ಭಟ್ಕಳ : ಹಳೆಯ ವೈಷಮ್ಯ ಹಾಗೂ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೊಲೆಗೀಡಾಗಿರುವ ಘಟನೆ ತಾಲೂಕಿನ ಬೆಣಂದೂರು ...

ಎನ್ ಡಿಆರ್ ಎಫ್ ತಂಡದಿಂದ ಅಣಕು ಪ್ರದರ್ಶನ. ಸಾರ್ವಜನಿಕರಲ್ಲಿ ರಕ್ಷಣಾ ಕಾರ್ಯದ ರೀತಿ ಮತ್ತು ಮಹತ್ವದ ಅರಿವು ಮೂಡಬೇಕು: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ : ಆಕಸ್ಮಿಕವಾಗಿ ಸಂಭವಿಸುವ ಘಟನೆಗಳಲ್ಲಿ ನೆರೆಹೊರೆಯವರು ಸೇರಿದಂತೆ ಸಾರ್ವಜನಿಕರು ತತಕ್ಷಣ ಸ್ಪಂಧಿಸುವುದರಿಂದ ಮತ್ತು ...

ಮತ ಚಲಾಯಿಸಿದ ಕೋವಿಡ್ ಸೋಂಕಿತರು

ಧಾರವಾಡ : ಬುಧವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ...