ಗಿಡ ನೆಡುವ ಮೂಲಕ ಪರಿಸರ ಉಳಿಸಲು ಕರೆ: ಜಿಲ್ಲಾಧಿಕಾರಿ

Source: so news | By MV Bhatkal | Published on 15th June 2019, 10:06 PM | State News | Don't Miss |

ಹಾಸನ: ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಗಿಡ ನೆಟ್ಟು ಪೋಷಿಸುವುದರ ಮೂಲಕ ಪರಿಸರ ಉಳಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಕರೆ ನೀಡಿದ್ದಾರೆ. 
ನಗರದ ಹೊಸಲೈನ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಆವರಣದಲ್ಲಿಂದು ಈದ್ಗಾ ಕಮಿಟಿ ಹಾಗೂ ಷರೀಪ್ ಚಾರೀಟಬಲ್ ಟ್ರಸ್ಟ್‍ವತಿಯಿಂದ ಆಯೋಜಿಸಲಾಗಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಾಹಕಾಧಿಕಾರಿಯವರಾದ ಡಾ.ಕೆ.ಎನ್.ವಿಜಯ್ ಪ್ರಕಾಶ್ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ನಂತರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಮಾತನಾಡಿ ಜಿಲ್ಲೆಯಲ್ಲಿ ಜಲಾಮೃತ ಹಾಗೂ ನರೇಗಾ ಯೋಜನೆಯಡಿ ಜಿಲ್ಲೆಯಾದ್ಯಂತ ಎಲ್ಲಾ ಈದ್ಗಾ ಮೈದಾನದಲ್ಲಿ, ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟಲ್‍ಗಳಲ್ಲಿ ಗಿಡ ನೆಡುವ ಮೂಲಕ ಪರಿಸರವನ್ನು ಉಳಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈದ್ಗಾ ಕಮಿಟಿ ಹಾಗೂ ಷರೀಪ್ ಚಾರೀಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಕೂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಮ್ಮುಖದಲ್ಲಿ ಇಲ್ಲಿಯು ಕೂಡ ಸಸಿ ನೆಡಲಾಗಿದ್ದು, ಹೆಚ್ಚೆಚ್ಚು ಜೀವ ಜಲ, ಕೆರೆಕಟ್ಟೆಗಳನ್ನು ಉಳಿಸುವುದರ ಜೊತೆಗೆ ಲಕ್ಷಾಂತರ ಗಿಡಗಳನ್ನು ನೆಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ರಂಪಾಷಾ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿಯವರಾದ ಡಾ.ಎಚ್.ಎಲ್.ನಾಗರಾಜ್, ಜಿಲ್ಲಾ ಪಂಚಾಯಿತಿಯ ಯೋಜನಾಧಿಕಾರಿ ಅರುಣ್ ಕುಮಾರ್, ಎಸ್.ಎಸ್.ಪಾಷಾ, ಪ್ರಾಂಶುಪಾಲರಾದ ಐಶಾ ಸುಲ್ತಾನ್, ಪ್ರಾಧ್ಯಾಪಕರಾದ ದವನ್ ಕುಮಾರ್, ಭಾಮಾ, ವಿನಯ್‍ಕುಮಾರ್ ಮತ್ತಿತರರು ಹಾಜರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...