ನಿರ್ಧರಿತ ಗುರಿಸಾಧಿಸಲು ಶ್ರಮಿಸುವಂತೆ ಮಾಂಕಾಳು ವೈದ್ಯ ವಿದ್ಯಾರ್ಥಿಗಳಿಗೆ ಕರೆ

Source: sonews | By Staff Correspondent | Published on 25th February 2020, 5:34 PM | Coastal News | Don't Miss |

ಭಟ್ಕಳ: ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಇತ್ತಿಚೆಗೆ ನಡೆಯಿತು. 

ಮಾಜಿ ಶಾಸಕ ಹಾಗೂ ಸಂಸ್ಥೆಯ ಅಧ್ಯಕ್ಷ ಮಾಂಕಾಳು ಎಸ್.ವೈದ್ಯ ಕಾರ್ಯಕ್ರಮ ಉದ್ಘಾಟಿಸಿ ತಮ್ಮ ನಿರ್ಧರಿತ ಗುರಿಯನ್ನು ಸಾಧಿಸಲು ವಿದ್ಯಾರ್ಥಿಗಳು ಕಠಿಣ ಶ್ರಮಿಗಳಾಗುವಂತೆ ಕರೆ ನೀಡಿ ತಮ್ಮಿಂದಾದ ಎಲ್ಲ ಸಹಾಯ, ಸಹಕಾರವನ್ನು ನೀಡುವುದಾಗಿ ತಿಳಿಸಿದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮಮತಾ ನಾಯ್ಕ ಮಾತನಾಡಿ   ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ಸಂಘಟಿಸಿದ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯಲ್ಲಿ ತಾವು ಪಡೆದ ಉತ್ತಮ ಶಿಕ್ಷಣದ ಕುರಿತು ತುಂಬು ಪ್ರೀತಿಯಿಂದ ಅನಿಸಿಕೆ ಹಂಚಿಕೊಂಡು ತಮ್ಮ ಮುಂದಿನ ಗುರಿಯನ್ನೂ ವ್ಯಕ್ತಪಡಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ನಿರ್ದೇಶಕಿ ಪುಷ್ಪಲತಾ ಎಂ. ವೈದ್ಯ ಮಕ್ಕಳಿಗೆ ಹಿತನುಡಿಗಳನ್ನಾಡಿದರು.  ಪ್ರಾಂಶುಪಾಲ ಜಗನ್ನಾಥ್ ಚಿನೇಕರ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...