ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ನಿಗಾ ವಹಿಸಲು ಕೇಂದ್ರ ವೀಕ್ಷಕರ ಸೂಚನೆ

Source: so news | By MV Bhatkal | Published on 30th March 2019, 12:29 AM | Coastal News | Don't Miss |

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದರ ವಿರುದ್ಧ ತೀವ್ರ ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳು ಇಲೆಕ್ಟ್ರಾನಿಕ್ ಮಾಧ್ಯಮವಾಗಿರುವುದರಿಂದ ಅವುಗಳಲ್ಲಿ ನಡೆಸುವ ಯಾವುದೇ ಪ್ರಚಾರವು ಪೂರ್ವಾನುಮತಿ ಪಡೆದಿರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಕೃಷ್ಣ ಕುನಾಲ್ ಸೂಚಿಸಿದ್ದಾರೆ. 
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳ ಜಂಟೀ ಸಭೆ ನಡೆಸಿ ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ಇನ್ನಷ್ಟು ಪರಿಣಾಮಕಾರಿಯಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಮತದಾರರಿಗೆ ಮತದಾನಕ್ಕೆ ಅಡ್ಡಿಯಾಗುವಂತಹ ಯಾವುದೇ ವ್ಯಕ್ತಿ ಅಥವಾ ಸಮಸ್ಯೆಗಳನ್ನು ಮೊದಲೇ ಗುರುತಿಸಿ, ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣಾ ವೀಕ್ಷಕರು ಉಭಯ ಜಿಲ್ಲೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪ್ರತೀ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪಿಯ ಪ್ರತಿಯೊಂದು ಮತಗಟ್ಟೆಯ ಮತದಾರರ ಅಂಕಿಅಂಶ ಹಾಗೂ ವಿವರ ಸಂಗ್ರಹಿಸಿಟ್ಟಿರಬೇಕು. ಇದರಿಂದ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಕೈಬಿಟ್ಟಿರುವುದರ ಬಗ್ಗೆ ಯಾವುದೇ ದೂರು ಬಂದರೆ ಕೂಡಲೇ ಸ್ಪಂದಿಸಬಹುದಾಗಿದೆ. ಚುನಾವಣೆಯಲ್ಲಿ ಮತದಾನ ಮಾಡಲು ಎಪಿಕ್ ಕಾರ್ಡ್ ಅಥವಾ ವೋಟರ್ ಸ್ಲಿಪ್ ಇಲ್ಲದಿದ್ದರೆ ಇತರೆ 11 ಯಾವುದಾದರೂ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು. ಈ ಬಗ್ಗೆ ಮತದಾರರಿಗೆ ವ್ಯಾಪಕ ಪ್ರಚಾರ ನೀಡುವಂತೆ ಕೇಂದ್ರ ವೀಕ್ಷಕರು ತಿಳಿಸಿದರು.
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮತಗಟ್ಟೆಗಳಲ್ಲಿ ಎಲ್ಲಾ ಸೌಲಭ್ಯಗಳು ಇರುವಂತೆ ಆಯಾ ಎಆರ್ಓಗಳು ಖುದ್ದು ಭೇಟಿ ನೀಡಿ ಗಮನಹರಿಸಬೇಕು. ಚುನಾವಣೆ ದಿನ ಆಯಾ ಮತಗಟ್ಟೆಯ ಹೊರಗಡೆ, ಮತಗಟ್ಟೆಯ ಮಾಹಿತಿ ನೀಡುವ ಬ್ಯಾನರ್ ಅಳವಡಿಸಬೇಕು ಎಂದು ಕೃಷ್ಣ ಕುನಾಲ್ ತಿಳಿಸಿದರು. 
ಚುನಾವಣಾ ಸಿಬ್ಬಂದಿಗಳಿಗೆ ತರಬೇತಿಯನ್ನು ಪರಿಣಾಮಕಾರಿಯಾಗಿ ನೀಡಬೇಕು. ಇದರಿಂದ ಮತದಾನ ದಿನದಂದು ಮತಗಟ್ಟೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರೂ ತ್ವರಿತವಾಗಿ ಪರಿಹರಿಸಬಹುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕೇಂದ್ರ ಚುನಾವಣಾ ಆಯೋಗದ ಪೊಲೀಸ್ ವೀಕ್ಷಕ ಸಂದೀಪ್ ಪ್ರಕಾಶ್ ಕಾರ್ಣಿಕ್ ಮಾತನಾಡಿ, ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಯಾವುದೇ ಪ್ರಚೋಧನಕಾರಿ ಭಾಷಣ ಮಾಡಿದರೆ ತಕ್ಷಣವೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಚುನಾವಣಾ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ ಪಕ್ಷಗಳ ನೀತಿ ಹಾಗೂ ಸಾಧನೆಗಳ ಬಗ್ಗೆ ಮಾತನಾಡಬಹುದು. ಆದರೆ ಯಾವುದೇ ರೀತಿಯಲ್ಲಿ ಪರಸ್ಪರ ಸಾಮರಸ್ಯಕ್ಕೆ ಭಂಗ ತರುವಂತೆ ಪ್ರಚಾರ ಕೈಗೊಂಡರೆ ತಕ್ಷಣವೇ ಈ ಬಗ್ಗೆ ಕ್ರಮ ಜರುಗಿಸಬೇಕು ಚೆಕ್ಪೋಸ್ಟ್ ತಪಾಸಣೆಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂದು ಹೇಳಿದರು. 
ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ತಮ್ಮ ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಸಿದ್ಧತೆಗಳ ಬಗ್ಗೆ ಕೇಂದ್ರ ವೀಕ್ಷಕರಿಗೆ ವಿವರ ನೀಡಿದರು.
ಸಭೆಯಲ್ಲಿ ಉಡುಪಿ ಜಿ.ಪಂ. ಸಿಇಓ ಸಿಂಧೂ ಬಿ ರೂಪೇಶ್, ಚಿಕ್ಕಮಗಳೂರು ಸಿಇಓ ಅಶ್ವಥಿ, ಉಭಯ ಜಿಲ್ಲೆಗಳ ಎಸ್ಪಿಗಳಾದ ನಿಶಾ ಜೇಮ್ಸ್, ಹರೀಶ್ ಪಾಂಡೆ ಅಪರ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ, ಕುಮಾರ್ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...