ಕಾರು ಅಪಘಾತ-ಮಂಗಳೂರು ಮೂಲದ ಯುವತಿ ಸಾವು

Source: SO News | By Laxmi Tanaya | Published on 11th September 2020, 10:22 PM | Coastal News | Don't Miss |

ಕಾಪು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು ಅಪಘಾತದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. 

ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಮೃತ ಯುವತಿ. ಕಾರು ಚಾಲಕ ನಿಹಾಲ್ ದಿನೇಶ್ ಶೆಟ್ಟಿ(24) ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. 

ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಈ  ಅವಘಡ ಸಂಭವಿಸಿದೆ. ಘಟನೆಯ ಸಂದರ್ಭ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮಂಗಳೂರಿನಿಂದ ಉಡುಪಿ ಕಾರು ತೆರಳುತ್ತಿತ್ತು.  ಹಳೆ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ  ವಿದ್ಯುತ್‌ ಕಂಬ ಧರೆಗುರುಳಿದೆ.‌ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...