ಕುಮಟಾ: ಕಾರು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು

Source: S O News | By Staff Correspondent | Published on 19th January 2023, 8:13 AM | Coastal News |

ಕುಮಟಾ: ತಾಲೂಕಿನ ದೀವಗಿಯ ರಾಷ್ಟ್ರೀಯ ಹೆದ್ದಾರಿ 66ರ ಶಿರಸಿ ಕ್ರಾಸ್ ಬಳಿ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಸಾವನಪ್ಪಿರುವ ಯುವಕನನ್ನು ಮುಂಡಗೋಡ ತಾಲೂಕಿನ ಮೈನಳ್ಳಿ ನಿವಾಸಿ ಪ್ರವೀಣ ಬಾಬು ಮಲ್ಲಿಕ್(22) ಎಂದು ಗುರುತಿಸಲಾಗಿದೆ.

ಇವರು ಅಂಕೋಲಾದಿಂದ ಕುಮಟಾ ಕಡೆಗೆ ತಮ್ಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಎದುರು ಬದಿಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆಯಿತು ಎಂದು ತಿಳಿದು ಬಂದಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಗಂಭೀರವಾಗಿ ಗಾಯಗೊಂಡ ಪ್ರವೀಣ್ ರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ್ದಾರೆ. ಆದರೆ  ಅವರ ತಲೆಗೆ ಗಂಭೀರ ಗಾಯಗೊಂಡಿರುವುದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...