ಕಾರು-ಲಾರಿ ನಡುವೆ ಡಿಕ್ಕಿ.. ಅಪಘಾತದಲ್ಲಿ ಓರ್ವ ಮಹಿಳೆ ಸಾವು, 8 ಮಂದಿಗೆ ಗಾಯ

Source: so news | Published on 9th October 2019, 12:11 AM | Coastal News | Don't Miss |

 

ಕುಮಟಾ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಕುಮಟಾ ಪಟ್ಟಣದ ಪಾಂಡುರಂಗ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಕೇರಳ ರಾಜ್ಯದ ಎರ್ನಾಕುಲಂನ ನಿವಾಸಿಗಳಾದ ಫೆಮಿ ರಾಜೇಶ (35) ಮೃತಪಟ್ಟ ಮಹಿಳೆಯಾಗಿದ್ದಾಳೆ. ಇನ್ನು, ರಾಜೇಶ (38), ಸಬು ಜೊಸೇಫ್ (47), ರ‍್ಯಾಸ್ಲಿ ಸ್ಟ್ಯಾನ್ಲಿ (47), ಎಂಡ್ರೋಸ್ (15), ರೈವ್ (8), ಎಲಿನಾ (8) ರಿಸ್ (4) ಎಬೆನ ಟಿ ಎಸ್ (13) ಎಂಬುವರು ಗಾಯಗೊಂಡಿದ್ದಾರೆ.ಅಪಘಾತವಾದ ಸ್ಥಳ..ಗೋವಾದಿಂದ ಕೇರಳದ ಎರ್ನಾಕುಲಂಗೆ ಇನೋವಾ ಕಾರಿನ ಮೂಲಕ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಇನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...