ಕಾರವಾರ ದೇವರ ದಾಸಿಮಯ್ಯ ಜಯಂತಿ ಆಚರಣೆ

Source: so news | By MV Bhatkal | Published on 11th April 2019, 12:18 AM | Coastal News | Don't Miss |

 


ಕಾರವಾರ:ಚಂಪು ಕಾವ್ಯ ಮತ್ತು ಸಂಸ್ಕøತದಲ್ಲೇ ಸಾಹಿತ್ಯ ರಚನೆಯಾಗುತ್ತಿದ್ದಂತಹ 11ನೇ ಶತಮಾನದಲ್ಲಿ ಕನ್ನಡದಲ್ಲಿ ವಚನಗಳನ್ನು ರಚಿಸಿದಂತಹ ದೇವರ ದಾಸಿಮಯ್ಯನವರು ಮೊದಲ ಕನ್ನಡ ವಚನಕಾರರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಹೇಳಿದರು. 
ಬುಧವಾರ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಿಲ್ಲಾಧಿಕಾರಿ ಮಾತನಾಡಿದರು. ದೇವರ ದಾಸಿಮಯ್ಯನವರೇ ಜೇಡರ್ ದಾಸಿಮಯ್ಯನವರಾಗಿದ್ದಾರೆ. ನೇಕಾರಿಕೆ ವೃತ್ತಿ ಮಾಡುತ್ತಾ ವಚನಗಳನ್ನು ರಚಿಸಿ, ಭಕ್ತಿ ಮಾರ್ಗದಲ್ಲಿ ಶಿವನನ್ನು ಆರಾಧಿಸಿ ಕಾಯಕವೇ ಕೈಲಾಸ ಎಂದು ಮಾಡಿ ತೋರಿಸಿದವರು. ಬಸವಣ್ಣ ಅಲ್ಲಮಪ್ರಭು ಅಕ್ಕಮಹಾದೇವಿಯಂತಹ ವಚನಕಾರರಲ್ಲಿ ದೇವರದಾಸಿಮಯ್ಯನವರೂ ಕೂಡಾ ಪ್ರಮುಖ ವಚನಕಾರರಲ್ಲಿ ಒಬ್ಬರು.  ವಚನಕಾರರ ಹೊರಾಟವು ವೈಚಾರಿಕವಾಗಿರುತ್ತಿತ್ತು. ತಮ್ಮ ವಚನಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದವರು. ದೇವರ ದಾಸಿಮಯ್ಯನವರ  ವಚನಗಳಲ್ಲಿರುವ ಸಂದೇಶಗಳನ್ನು ಓದುವ ಮೂಲಕ ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ಅವರು ತಿಳಿಸಿದರು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಮ್. ರೋಶನ್ ಅವರು ಮಾತನಾಡಿ ಆಧಿ ವಚನಕಾರ ದೇವರ ದಾಸಿಮಯ್ಯ ಅವರು ರಚಿಸಿರುವ 150ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ವಚನಗಳನ್ನು ಇಂದಿನ ಯುವ ಪೀಳಿಗೆ ಓದಿ ತಿಳಿದುಕೊಳ್ಳಬೇಕು. ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.     
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹಿಮಂತರಾಜು.ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು.  ಅಪರ ಜಿಲ್ಲಾಧಿಕಾರಿಗಳಾದ ನಾಗರಾಜ ಸಿಂಗ್ರೇರ್, ಪ್ರೋಬೇಶನರಿ ಐ.ಎ.ಎಸ್ ಅಧಿಕಾರಿ ದೀಲಿರ್ ಸಸಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...