ಜಿಲ್ಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಪ್ರಕರಣ ದಾಖಲು

Source: sonews | By Staff Correspondent | Published on 2nd April 2020, 5:19 PM | Coastal News | Don't Miss |

ಕಾರವಾರ:   ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ಅವರು ತಿಳಿಸಿದರು. 
 
ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ ನಿಷೇಧಾಜ್ಞೆ ಆದೇಶವನ್ನು ಜಾರಿಗೊಳಿಸಿದಾನಿಂದ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ 16 ಚೆಕ್ ಪೋಸ್ಟ್‍ಗಳನ್ನು ತೆರೆಯುವದರೊಂದಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುತ್ತದೆ. ಕಳೆದ ಒಂದೇ ವಾರದ ಅವಧಿಯಲ್ಲಿ 10 ಪ್ರಕರಣಗಳನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿರುತ್ತದೆ.  ರಾಮನಗರ, ಮಲ್ಲಾಪುರ, ಕದ್ರಾ ದಲ್ಲಿ ತಲಾ 1, ಭಟ್ಕಳ ಶಹರದಲ್ಲಿ 3, ಹಾಗೂ ಹಳಿಯಾಳದಲ್ಲಿ  2 ಪ್ರಕರಣ ದಾಖಲಾದರೆ, ದಾಂಡೇಲಿ ನಗರ ಠಾಣೆಯಲ್ಲಿ  2 ಪ್ರಕರಣ ದಾಖಲಿಸಿದ್ದು, ಒಂದು ಅಬಕಾರಿ ಕಾಯ್ದೆಯಡಿ ಮತ್ತೊಂದು ಐಪಿಸಿ ಹಾಗೂ ವಿಪತ್ತು ನಿರ್ವಾಹಣಾ ಕಾಯ್ದೆಯಡಿ ದಾಖಲಾಗಿರುತ್ತವೆ ಇದಲ್ಲದೇ ಮಾರ್ಚ 24 ಒಂದೇ ದಿನದಲ್ಲಿ ಜಿಲ್ಲೆಯಾದ್ಯಂತ 20 ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿ 09 ಜನ ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಹಾಗೂ 4 ಬೈಕ್, 1 ಕಾರ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಮಾಹಿತಿ ನೀಡಿದರು. 

ದೇಹಲಿಯ ಜಮಾತ್  ಸಭೆಯಲ್ಲಿ ಭಾಗವಹಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜನರನ್ನು ಗುರುತಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಜಮಾತ್ ಸಭೆಗೆ ಹೊಗುವುದು ತಪ್ಪಲ್ಲ ಆದರೆ ಕರೋನಾ ವೈರಸ್ ಹರಡುವಿಕೆ ಸಾಧ್ಯತೆ ಇರುವದರಿಂದ ಜಿಲ್ಲೆಯ ಜನರು ಈ ತರಹದ ಸಭೆಗೆ ಹಾಜರಾಗಿದ್ದಲಲ್ಲಿ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡುವ ಮೂಲಕ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಒಂದು ವೇಳೆ ಬಚ್ಚಿಟ್ಟಲ್ಲಿ ತಪ್ಪಾಗುತ್ತದೆ. ಜನರು ಭಯ ಪಡಬೇಕಿಲ್ಲ. ತಮ್ಮ ಕುಟುಂಬ ಹಾಗೂ ಸಮಾಜದ ಹಿತರಕ್ಷಣೆಗಾಗಿ ಸರಕಾರದೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು. 

ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ  ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಹೋಗದೇ, ಶಾಂತ ರೀತಿಯಿಂದ ಪೊಲೀಸರೊಂದಿಗೆ ಸಹಕರಿಸುವಂತೆ ಮಾಧ್ಯಮಗಳ ಮೂಲಕ ಪೊಲೀಸ್ ವರಿಷ್ಠಾಧಿಕಾರಿ ಕೋರಿದರು.  
 

Read These Next

ಮಾಜಿ ಶಾಸಕ ಮಾಂಕಾಳರ ನೆರವಿನಿಂದ ಭಟ್ಕಳದಿಂದ ಓಡಿಸ್ಸಾ ಕ್ಕೆ ಪ್ರಯಾಣ ಬೆಳೆಸಿದ 70 ಮೀನುಗಾರರು

ಭಟ್ಕಳ: ಸೇವಾ ಸಿಂಧು ಆ್ಯಫ್‍ನಲ್ಲಿ ಹೆಸರು ನೊಂದಾಯಿಸಿ ತಮ್ಮ ರಾಜ್ಯಕ್ಕೆ ಮರಳು  ಕಾಯುತ್ತಿದ್ದ ಒಡಿಸ್ಸಾದ 70 ಮೀನುಗಾರರು ಸೋಮವಾರದಂದು ...

ಶಿಕ್ಷಕಿನಿಂದ ಪುರಸಭೆ ಆಸ್ತಿ ಹಾನಿ  ವಿಡಿಯೋ ವೈರಲ್ ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಕ್ರಮಕ್ಕೆ ಆಗ್ರಹ - ಅಸ್ಲಂ

ಶ್ರೀನಿವಾಸಪುರ: ಪಟ್ಟಣದ ವಾರ್ಡ್ ಸಂಖ್ಯೆ 14 ಗಫಾರ್‌ ಖಾನ್‌ ಮೊಹಲ್ಲಾದಲ್ಲಿ ಪುರಸಭೆ ವತಿಯಿಂದ ನಿರ್ಮಿಸಿರುವ ಕೊಳವೆ ಬಾವಿಗೆ ...