ಉಳ್ಳಾಲ ಮತ್ತು ಕೊಣಾಜೆಯಲ್ಲಿ ಗಾಂಜಾ ಪ್ರಕರಣ. ಪ್ರತ್ಯೇಕ ಪ್ರಕರಣದಲ್ಲಿ ಐವರ ಬಂಧನ.

Source: SO News | By Laxmi Tanaya | Published on 23rd January 2021, 9:12 PM | Coastal News | Don't Miss |

ಮಂಗಳೂರು :  ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
 
ಪೋಕರ್ ಅಝೀಝ್ ಮತ್ತು ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದಿನ್ ಎಂಬುವವರನ್ನು ಕುತ್ತಾರಿನಲ್ಲಿ ಸಿಸಿಬಿ ತಂಡ ಬಂಧಿಸಿದೆ. ಬಂಧಿತರಿಂದ 23.980 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಬಂಧಿತ ಆರೋಪಿಗಳು. ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 15 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...