ಕಾವೇರಿದ ಬಂದ್‌; ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಯತ್ನ 25ಕ್ಕೂ ಹೆಚ್ಚು ಮಂದಿ ಪೊಲೀಸ್‌ ವಶಕ್ಕೆ

Source: Vb | By I.G. Bhatkali | Published on 30th September 2023, 8:16 AM | State News |

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇ ಗೌಡ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾ ಣದೊಳಗೆ ನುಗ್ಗಿ ವಿಮಾನ ಸಂಚಾರಕ್ಕೆ ಅಡ್ಡಿ ಪಡಿಸಲು ಯತ್ನಿಸಿದ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿ ರುವ ಘಟನೆ ಶುಕ್ರವಾರ ವರದಿಯಾಗಿದೆ. 'ನಮ್ಮ ಕರ್ನಾಟಕ ಸೇನೆ'ಯ ಐವರು ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ 9:50ರ ಇಂಡಿಗೋ 7731 ವಿಮಾನದ ಟಿಕೆಟ್ ಬುಕ್ ಮಾಡಿಕೊಂಡು ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿ ವಿಮಾನವನ್ನು ತಡೆದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಈ ವೇಳೆ ತಕ್ಷಣ ಎಚ್ಚೆತ್ತ ಪೊಲೀಸರು ಕೂಡಲೇ ಐವರನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ನಿರ್ಗಮನ ಗೇಟ್ ಬಳಿ ಕನ್ನಡ ಬಾವುಟಗಳನ್ನು ಹಿಡಿದು ಕಾವೇರಿ ನೀರು ಹರಿಸುವುದರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮುತ್ತಿಗೆ ಹಾಕಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದಿದ್ದು, ತನಿಖೆ ನಡೆಸುತ್ತಿದ್ದಾರೆ.

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಹಿನ್ನೆಲೆ ಕೆಲಕಾಲ ಈ ಘಟನೆಗಳನ್ನು ಜರುಗಿದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಂದ್‌ನಿಂದಾಗಿ ಪ್ರಯಾಣಿಕರ ವಿಳಂಬದ ಕಾರಣ ಕೆಲವು ವಿಮಾನಗಳ ಸಂಚಾರವನ್ನೂ ರದ್ದುಗೊಳಿಸಲಾಗಿತ್ತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...