ಸೆ22 ರಿಂದ ಸಿಬಿಎಸ್‌ಇ 10 ಮತ್ತು 12 ನೇ ತರಗತಿಗಳ ಪೂರಕ ಪರೀಕ್ಷೆ

Source: sonews | By Staff Correspondent | Published on 4th September 2020, 10:28 PM | National News |

ಹೊಸದಿಲ್ಲಿ: 10 ಮತ್ತು 12ನೇ ತರಗತಿಗಳ ಪೂರಕ ಪರೀಕ್ಷೆಗಳು ಸೆ.22ರಿಂದ 29ರವರೆಗೆ ನಡೆಯಲಿವೆ ಎಂದು ಸಿಬಿಎಸ್‌ಇ ಶುಕ್ರವಾರ ಪ್ರಕಟಿಸಿದೆ.

ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾಥಿಗಳು ಪಾರದರ್ಶಕ ಬಾಟಲ್‌ಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಕುಡಿಯುವ ನೀರನ್ನು ತರಬೇಕು ಹಾಗು ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪರೀಕ್ಷೆಗಳಿಗೆ ಹಾಜರಾಗುವುದು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುವುದರಿಂದ ಈ ತಿಂಗಳಿನಲ್ಲಿ ನಿಗದಿತ 12ನೇ ತರಗತಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಬೆಳಿಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿರೋಧಿಸಿದ್ದ ಸಿಬಿಎಸ್‌ಇ,ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿತ್ತು.

ಸರ್ವೋಚ್ಚ ನ್ಯಾಯಾಲಯವು ಸೆ.10ರಂದು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...