ಹೊಸದಿಲ್ಲಿ: 10ನೇ ತರಗತಿಯ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

Source: VB | By S O News | Published on 16th April 2021, 6:28 AM | National News |

ಹೊಸದಿಲ್ಲಿ: ದೇಶವ್ಯಾಪಿ ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ನಡೆಸಿದ ಸಭೆಯ ಬಳಿಕ ಈ ಮಹತ್ವದ
ನಿರ್ಧಾರ ಹೊರಬಿದ್ದಿದೆ.

ಮೇ 4ರಿಂದ ಜೂ.1ರವರೆಗೆ ನಡೆಯಲಿದ್ದ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೊಸ ದಿನಾಂಕಗಳ ಬಗ್ಗೆ ಜೂ.1ರಂದು ನಿರ್ಧಾರವನ್ನು ಕೈಗೊಳ್ಳಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಕನಿಷ್ಠ 15 ದಿನ ಮೊದಲು ತಿಳಿಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖಿಯಾಲ್ ನಿಷಾಂಕ ಅವರು ಟ್ವೀಟಿಸಿದ್ದಾರೆ.

ರದ್ದುಗೊಂಡಿರುವ 10ನೇ ತರಗತಿ ಪರೀಕ್ಷೆಗಳ ಕುರಿತಂತೆ ಅವರು, ಸಿಬಿಎಸ್‌ಇ ರೂಪಿಸಲಿರುವ ವಸ್ತುನಿಷ್ಠ ಮಾನದಂಡದ ಆಧಾರದಲ್ಲಿ ಫಲಿತಾಂಶಗಳನ್ನು ಸಿದ್ಧಪಡಿಸಲಾಗುವುದು, ತಮ್ಮ ಅಂಕಗಳ ಬಗ್ಗೆ ಅತೃಪ್ತಿಯಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆದಾಗ ಅದಕ್ಕೆ ಹಾಜರಾಗಲು ಅವಕಾಶವನ್ನು ನೀಡಲಾಗುವುದು ಎಂದೂ ತಿಳಿಸಿದ್ದಾರೆ.

ಐಸಿಎಸ್‌ಇ ಪಠ್ಯಕ್ರಮದಡಿ ನಿರ್ಧಾರ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. 10ನೇ ತರಗತಿ ಪರೀಕ್ಷೆಗಳಿಗೆ 21.5 ಲ. ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಸುಮಾರು 14 ಲ.ವಿದ್ಯಾರ್ಥಿಗಳು ಹಾಜರಾಗಲಿದ್ದರು ಎಂದು ಸಿಬಿಎಸ್‌ಇ ತಿಳಿಸಿದೆ.

ಶಿಕ್ಷಣವು ಮುಖ್ಯವಾಗಿದ್ದರೂ ವಿದ್ಯಾರ್ಥಿಗಳ ಆರೋಗ್ಯಕ್ಕೆ ಮತ್ತು ಯೋಗಕ್ಷೇಮಕ್ಕೆ ಸರಕಾರವು ಅತ್ಯುನ್ನತ ಆದ್ಯತೆಯನ್ನು ನೀಡಿದೆ ಎಂದು ಮೋದಿ ಸಭೆಯಲ್ಲಿ ಹೇಳಿದರೆನ್ನಲಾಗಿದೆ.

ವಿದ್ಯಾರ್ಥಿಗಳು ಮತ್ತು ಹೆತ್ತವರೊಂದಿಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ,ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೇರಿದಂತೆ ಹಲವಾರು ನಾಯಕರೂ, ಲಕ್ಷಾಂತರ ವಿದ್ಯಾರ್ಥಿಗಳು ಸೋಂಕಿಗೆ ಗುರಿಯಾಗುವುದನ್ನು ತಡೆಯಲು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಆಗ್ರಹಿಸಿದ್ದರು

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...