ಹೊಸದಿಲ್ಲಿ: ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆರದ್ದು

Source: VB | By S O News | Published on 2nd June 2021, 1:52 PM | National News |

ಹೊಸದಿಲ್ಲಿ: ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಈ ವರ್ಷದ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರ ಸರಕಾರವು ಮಂಗಳವಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವಾಲಯವು ಪ್ರಕಟನೆಯಲ್ಲಿ ತಿಳಿಸಿದೆ.

ಸಿಬಿಎಸ್‌ಇ ಕಾಲಬದ್ಧ ರೀತಿಯಲ್ಲಿ 'ಸೂಕ್ತ ವಸ್ತುನಿಷ್ಠ ಮಾನದಂಡಗಳ' ಆಧಾರದಲ್ಲಿ 12ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸಿದ್ಧಪಡಿಸಲಿದೆ ಎಂದು ಅದು ತಿಳಿಸಿದೆ.

ಕಳೆದ ವರ್ಷದಂತೆ, ಕೆಲವು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ಇಚ್ಛಿಸಿದರೆ ಅದಕ್ಕೆ ಸಿಬಿಎಸ್‌ಇ ಅವಕಾಶವನ್ನು ಕಲ್ಪಿಸಲಿದೆ ಮತ್ತು ಪೂರಕ ವಾತಾವರಣವು ಸೃಷ್ಟಿಯಾದಾಗ ಪರೀಕ್ಷೆಗಳನ್ನು ನಡೆಸಲಾಗುವುದು.

ವಿದ್ಯಾರ್ಥಿಗಳ ಹಿತಾಸಕ್ತಿಯ ದೃಷ್ಟಿಯಲ್ಲಿ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಹೇಳಿದ ಮೋದಿ,ಕೋವಿಡ್-19 ಶೈಕ್ಷಣಿಕ ವರ್ಷವನ್ನು ವ್ಯತ್ಯಯಗೊಳಿಸಿದೆ ಮತ್ತು ಸಿಬಿಎಸ್‌ಇ ಪರೀಕ್ಷೆಗಳ ವಿಷಯವು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ ಮತ್ತು ಇದಕ್ಕೆ ಅಂತ್ಯ ಹಾಡಬೇಕಿದೆ ಎಂದು ತಿಳಿಸಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...