ಸಿಬಿಎಸ್‌ಇ ಫಲಿತಾಂಶ | ಶೇಕಡ 91.46 ರಷ್ಟು ಉತ್ತೀರ್ಣ, ಬಾಲಕಿಯರ ಮೇಲುಗೈ

Source: uni | Published on 16th July 2020, 12:02 AM | State News | Don't Miss |

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಸಿಬಿಎಸ್‍ಇ) 10ನೇ ತರಗತಿ ಫಲಿತಾಂಶವನ್ನು ಬುಧವಾರ ಪ್ರಕಟಿಸಿದೆ.
ಫೆ. 15ರಿಂದ ಮಾ. 20 ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ ಒಟ್ಟಾರೆ ಶೇಕಡ 91.46 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 91.10 ರಷ್ಟಿತ್ತು. 
ಈ ಬಾರಿ 18,73,015 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 17,13,121 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕಿಯರು ಶೇ 93.31, ಬಾಲಕರು ಶೇ 90.14 ರ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ. 

cbseresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ.

ಪ್ರದೇಶವಾರು ಫಲಿತಾಂಶ (ಶೇಕಡಾದಲ್ಲಿ)

ತಿರುವನಂತಪುರ - 99.28%
ಚೆನ್ನೈ- 98.95%
ಬೆಂಗಳೂರು –98.23%
ಪುಣೆ –98.05%
ಅಜ್ಮೇರ್- 96.993%
ಪಂಚಕುಲಾ- 94.31
ಭುವನೇಶ್ವರ್- 93.20
ಭೋಪಾಲ್‌ –92.86
ಛಂಡಿಗಡ–91.83
ಪಟ್ನಾ –90.69
ಡೆಹ್ರಾಡೂನ್ –89.72
ಪ್ರಯಾಗ್‌ರಾಜ್- 89.12
ನೋಯ್ಡಾ –87.51 

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ (ಎಚ್‌ಆರ್‌ಡಿ) ರಮೇಶ್‌ ನಿಶಾಂಕ್ ಪೋಖ್ರಿಯಾಲ್‌ ಅವರು, ಫಲಿತಾಂಶ ಪ್ರಕಟಿಸಿರುವ ಬಗ್ಗೆ ಖಚಿತಪಡಿಸಿದ್ದಾರೆ. 
ಕೋವಿಡ್‌ನಿಂದಾಗಿ, ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆಯನ್ನು ಮಂಡಳಿ ರದ್ದುಪಡಿಸಿತ್ತು. ಹೀಗಾಗಿ, ಪರ್ಯಾಯ ಮೌಲ್ಯಮಾಪನ ಆಧಾರದಲ್ಲಿ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸಲಾಗಿದೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...