ಸಿಸಿಬಿ ಪೊಲೀಸರ ಕಾರು ಮಾರಾಟ ಪ್ರಕರಣ : ಇಬ್ಬರು ಪೊಲೀಸರು ಅಮಾನತು...!

Source: S.O. News Service | By MV Bhatkal | Published on 27th February 2021, 5:00 PM | Coastal News |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ  ಪ್ರಕರಣವೊಂದಕ್ಕೆ ಆರೋಪಿಗಳಿಗೆ ಸೇರಿದ ಕಾರನ್ನು ಸಿಸಿಬಿ ಪೊಲೀಸರು ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದ ತನಿಖೆಗಾಗಿ ಸಿಐಡಿ ತಂಡ ಮಂಗಳೂರಿಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ.


ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ  ಪೊಲೀಸರ ವಶದಲ್ಲಿದ್ದ ಐಷಾರಾಮಿ ಕಾರೊಂದನ್ನು ಮಾರಾಟ ಮಾಡಿದ ಪ್ರಕರಣದಲ್ಲಿ  ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಿಸಿಬಿಯಲ್ಲಿ ಈ ಹಿಂದೆ ಮಂಗಳೂರಿನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದ ಕಬ್ಬಾಳ್‌ರಾಜ್ ಮತ್ತು ಮಂಗಳೂರಿನ ನಾರ್ಕೋಟಿಕ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಕರ್ನಾಟಕ ಡಿಜಿ ಮತ್ತು ಐಜಿಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಪ್ರಕರಣವೊಂದರ ಸಂಬಂಧ ಪೊಲೀಸರ ವಶದಲ್ಲಿ ಕಾರನ್ನು ಮಾರಾಟ ಮಾಡಿದ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿತ್ತು. ವಂಚನೆ ಪ್ರಕರಣದ ಆರೋಪಿಗಳ ಜೊತೆ ಡೀಲ್ ಮಾಡಿ ಕಾರು ಮಾರಾಟಕ್ಕೆ ಯತ್ನಿಸಿದ್ದರು. ಈ ನಿಟ್ಟಿನಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಉದನೆ ಸಮೀಪ ಹಣ ಡಬ್ಬಲ್ ಮಾಡಿಕೊಡುವುದಾಗಿ ಹೇಳಿಕೊಂಡು ತಿರುಗುತ್ತಿದ್ದ ಕೇರಳ ಮೂಲದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧನದ ವೇಳೆ ಆರೋಪಿಗಳಿಂದ ಮೂರು ಐಷಾರಾಮಿ  ಕಾರುಗಳನ್ನು ಜಪ್ತಿ ಮಾಡಲಾಗಿತ್ತು. ಇದರಲ್ಲಿ ಒಂದನ್ನು ಐವತ್ತು ಲಕ್ಷಕ್ಕೆ ಮಾರಾಟ ಮಾಡಲಾಗಿದ್ದು, ಇದರಲ್ಲಿ ಸಿಸಿಬಿ ಪೊಲೀಸರು ಕೈ ಜೋಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸಿಐಡಿ ಎಸ್‌ಪಿ ರೋಹಿಣಿ ಕಟ್ಟೋಚ್‌ ಅವರ ನೇತೃತ್ವದ ತಂಡ ತನಿಖೆ ಆರಂಭಿಸಿದ್ದು, ಸಿಐಡಿ ಡಿಜಿಗೆ ವರದಿ ಸಲ್ಲಿಸಲಿದೆ. ಅನಂತರ ಅದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸಲ್ಲಿಕೆಯಾಗಲಿದೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿಗೆ ಈಗಾಗಲೆ ನೋಟಿಸ್‌ ನೀಡಲಾಗಿದೆ. ಪ್ರಾಥಮಿಕ ಹಂತದ ತನಿಖೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್‌ ಗಾಂವ್ಕರ್‌ ಅವರು ನಡೆಸಿದ್ದು, ಅದರ ವರದಿಯಲ್ಲಿ ಕಮಿಷನರ್‌ಗೆ ಸಲ್ಲಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಅಪರಾಧ ಪತ್ತೆದಳ ಹಿಂದಿನ ಎಸ್‌ಐ ಕಬ್ಬಳ್‌ರಾಜ್‌, ಸಿಸಿಬಿಯ ಆಶಿತ್‌, ರಾಜ ಹಾಗೂ ನಾರ್ಕೊಟಿಕ್‌ ಆ್ಯಂಡ್‌ ಎಕನಾಮಿಕ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅವರ ಹೆಸರು ಹಾಗೂ ಬ್ರೋಕರ್‌ ದಿವ್ಯದರ್ಶನ್‌ ಹೆಸರನ್ನು ಉಲ್ಲೇಖ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಣ ದ್ವಿಗುಣಗೊಳಿಸಿ ವ್ಯವಹಾರ ನಡೆಸುತ್ತಿದ್ದ ಎಲಿಯಾ ಸಂಸ್ಥೆ ನಡೆಸಿದ ವಂಚನೆ ಪ್ರಕರಣವನ್ನು ಕೂಡ ಸಿಐಡಿಗೆ ವಹಿಸಲಾಗಿದೆ.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...