ಪೋಷಣ ಅಭಿಯಾನ ಮಾಹೆಯ ಆಚರಣೆ

Source: S.O. News Service | Published on 21st September 2019, 9:41 PM | State News | Don't Miss |

ಬೆಳಗಾವಿ:ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ಗ್ರಾಮ ಪಂಚಾಯತಿ ಕಾಕತಿ ಇವರ ಸಹಯೋಗದಲ್ಲಿ “ಪೋಷಣ ಅಭಿಯಾನ ಮಾಹೆಯ ಆಚರಣೆ ಅಂಗವಾಗಿ ಬೆಳಗಾವಿ ಕಾಕತಿಯ ಸಿದ್ದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಪೋಷಣ ಅಭಿಯಾಣಕ್ಕೆ ಸಂಭಧಿಸಿದ ವಿವಿಧ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಯಲ್ಲಪ್ಪ ಕೋಳೆಕರ ತಾಲೂಕು ಪಂಚಾಯತಿ ಸದಸ್ಯರು ಕಾಕತಿ ಇವರು ಉದ್ಘಾಟಿಸಿ ಮಾತನಾಡುತ್ತಾ ಪೂರಕ ಆಹಾರದಿಂದ ಮಗುವಿನ ಬೆಳವಣಿಗೆ ಉತ್ತಮ ಮಟ್ಟದ್ದಾಗುತ್ತದೆ. ಗರ್ಭಿಣಿಯರು ಪೂರಕ್ ಆಹಾರ ಸೇವಿಸುವದರಿಂದ ಹೆರಿಗೆ ಸಮಯದಲ್ಲಿ ಉಂಟಾಗುವ ಅನೇಕ ತೊಂದರೆಗಳಿಂದ ಪಾರಾಗಬಹುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಸಮಾಜದ ಕೊನೆಯ ವ್ಯಕ್ತಿಗಳಿಗೂ ಸಹ ಮುಟ್ಟಿಸಬೇಕೆಂದು ತಿಳಿಸಿದರು. 
ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದನಗೌಡ ಸುಣಗಾರ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರು ಕಾಕತಿಯವರು ಮಾತನಾಡಿ ವೈಯಕ್ತಿಕ ಸ್ವಚ್ಚತೆಗೆ ಗಮನ ನೀಡುವುದು ಅವಶ್ಯಕವಾಗಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ರೋಟಾ ವೈರಸ್ ಲಸಿಕೆಯನ್ನು ನೀಡಲಾಗುತ್ತಿದ್ದು ಸಾರ್ವಜನಿಕರು ಅದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿ ತಾಯಿಂದಿರಿಗೆ ಸೀಮಂತ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು ಪ್ರಾತ್ಯಕ್ಷಿಕೆಯ ಮೂಲಕ ಕೈತೋಳೆಯುವ ಕಾರ್ಯಕ್ರಮ ಹಾಗೂ ಪೌಷ್ಠಿಕ ಆಹಾರದ ಶಿಬಿರನ್ನು ಆಯೋಜಿಸಲಾಗಿತ್ತು.
ಪೋಷಣ ಅಭಿಯಾನದ ಕುರಿತು ಪ್ರಾಸ್ತಾವಿಕ ಶ್ರೀ ಬಸವರಾಜ ಯಲಿಗಾರ ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿಗಳು ಪೂರಕ ಆಹಾರದ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಶ್ರೀ ಅಶೋಕ ಕುಂಬಾರ, ಶ್ರೀ ಬಸವರಾಜ ಗಾಣಗೇರ, ಶಕುಂತಲಾ ಮಾನಗಾಂವಿ ಗ್ರಾಮ ಲೆಕ್ಕಾಧಿಕಾರಿ ಶ್ರೀ ಪ್ರಕಾಶ ಗಮಾನೆ, ಡಾ.ಸಂಗಿತಾ, ಡಾ.ಗೌತಮ, ಶ್ರೀ ಬಾಹುಬಲಿ ಮೆಳವಂಕಿ, ಆರೋಗ್ಯ ಸಹಾಯಕರಾದ ಲಕ್ಷ್ಮಿ ತೇಲಿ, ಗುರು ಮೇದಾರ, ಆಶಾ,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು  ಹಾಜರಿದ್ದರು.ಕಾರ್ಯಕ್ರಮವನ್ನು ಶ್ರೀ ಸಿ.ಜಿ ಅಗ್ನಿಹೋತ್ರಿ ಹಿರಿಯ ಆರೋಗ್ಯ ಸಹಾಯಕರು ಸ್ವಾಗತಿಸಿದರು. ರೇಖಾ ಉಪ್ಪಾರ ಅಂಗನವಾಡಿ ಮೇಲ್ವಿಚಾರಕಿ ನಿರೂಪಿಸಿ ವಂದಿಸಿದರು.

 

                                        
 

 

 

 

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...