ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮರ ಜಯಂತಿಯನ್ನು ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಕೋವಿಡ್ ಕಾರಣದಿಂದಾಗಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಿತ್ತೂರು ಚನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿ ನಮಿಸಿದರು.
ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಹಾಗೂ ಸಮಾಜದ ಮುಖಂಡರಾದ ನಿಂಗಣ್ಣ ಕರಿಕಟ್ಟಿ, ಬಸವರಾಜ ಏಣಗಿ, ರಮೇಶ್ ತಳಗೇರಿ ಸೇರಿದಂತೆ ಇತರರು ಇದ್ದರು.