ಪಿ.ಎಮ್. ಕಿಸಾನ್ ಯೋಜನೆ ಅನುಷ್ಠಾನ ಚುರುಕುಗೊಳಿಸಿ : ಜಿಲ್ಲಾಧಿಕಾರಿ

Source: S.O. News Service | By MV Bhatkal | Published on 3rd July 2019, 3:22 PM | State News | Don't Miss |

ಹಾಸನ: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಅರ್ಹ ರೈತರುಗಳಿಂದ ಸ್ವೀಕರಿಸಿದ ಹಾಗೂ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಶೀಘ್ರದಲ್ಲಿಯೇ ಶೇ.100 ರಷ್ಟು ಪರಿಶೀಲಿಸಿ ಪರಿಪೂರ್ಣವಾಗಿ ಗಣಕೀಕರಣಗೊಳಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಸಂಬಂಧ ಪಟ್ಟ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗ್ರಾಮ ಲೆಕ್ಕಾಧಿಕಾರಿಗಳ ಸಹಾಯದಿಂದ ಪ್ರತಿ ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲಿ ಮನೆ ಮನೆಗೂ ಭೇಟಿ ನೀಡಿ ರೈತರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಪರಿಪೂರ್ಣವಾದವುಗಳನ್ನು ಗಣಕೀಕರಣಗೊಳಿಸಬೇಕು ಎಂದರು.
ಸಮಸ್ಯಾತ್ಮಕ ಅರ್ಜಿಗಳಿದ್ದಲ್ಲಿ ಅದಕ್ಕೆ ಕಾರಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಹಾಗೂ ಅನರ್ಹ ಅರ್ಜಿಗಳನ್ನು ತಿರಸ್ಕøತಗೊಳಿಸಬೇಕು ಎಂದು ಕೃಷಿ ಇಲಾಖೆ, ತೊಟಗಾರಿಕೆ ಇಲಾಖೆಗಳಿಗೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ತಹಸೀಲ್ದಾರ್ ಅವರ ಮಾರ್ಗದರ್ಶನದಂತೆ, ಎಲ್ಲಾ ನೋಡಲ್ ಅಧಿಕಾರಿಗಳು ಮುಂದಿನ ಒಂದು ವಾರದೊಳಗಾಗಿ ರೈತರಿಂದ ಅರ್ಜಿಗಳನ್ನು ಶೇ.100 ರಷ್ಟು ಯಾವುದೇ ಸಮಸ್ಯೆಗಳಿಲ್ಲದಂತೆ ಪಡೆಯಬೇಕು ಹಾಗೂ ಪೌತಿ ಖಾತೆಗಳನ್ನು ಸಹ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಇದೇ ರೀತಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿ ವೇತನ ವಿತರಣೆಗೆ ಅಗತ್ಯವಿರುವ ಆಧಾರ್ ನೊಂದಣಿ ಕಾರ್ಯವನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಅಕ್ರಂ ಪಾಷ ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿಯವರಾದ ಎಂ.ಎಲ್.ವೈಶಾಲಿ ಅವರು ಮಾತನಾಡಿ ರೈತರಿಂದ ಸಂಪೂರ್ಣ ನಿಖರವಾದ ಮಾಹಿತಿಯನ್ನು ಪಡೆಯಬೇಕು. ಆಧಾರ್ ಕಾರ್ಡ್‍ಗಳ ಜೋಡಣೆ ವ್ಯವಸ್ಥೆಯು ನಡೆಯಬೇಕೆಂದು ಹಾಗೂ ಈ ಸಂಬಂಧ ಅಧಿಕಾರಿಗಳಿಗೆ ಸಲಹೆಗಳನ್ನು ಸೂಚಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಮಧುಸೂದನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಸೇರಿದಂತೆ ಮತ್ತಿತರರು ಹಾಜರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...