ಮಂಡ್ಯ ಏಪ್ರಿಲ್ 18 ರಿಂದ ಜನಗಣತಿ

Source: S.O. News Service | Published on 21st January 2020, 7:22 PM | State News | Don't Miss |

ಮಂಡ್ಯ:ಜಿಲ್ಲೆಯಲ್ಲಿ ಏಪ್ರಿಲ್ 18 ರಿಂದ ಮೇ 29ರವರೆಗೆ ಒಟ್ಟು 45 ದಿನಗಳಕಾಲ ಜನಗಣತಿ ಪ್ರಕ್ರಿಯೆ ನಡೆಯಲಿದೆ. ಇದರ ಜತೆಗೆ ಎನ್.ಅರ್.ಪಿ ಕೂಡ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜನಗಣತಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‍ಗಳ ಸಮ್ಮುಖದಲ್ಲಿ ನಡೆದ ವಿಡೀಯೊ ಕಾನ್ಫರನ್ಸ್‍ನಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಏಫ್ರಿಲ್ 18 ರಿಂದ ಜನಗಣತಿಯನ್ನು ಹಮ್ಮಿಕೊಂಡಿದ್ದು, ಇದು ಭಾರತದ 15ನೇ ಜನಗಣತಿಯಾಗಿದೆ. ಈ ಬಾರಿಯ ಜನಗಣತಿಯನ್ನು ಮೊಬೈಲ್ ಮೂಲಕ ಮಾಡಲಾಗುತ್ತದೆ ಎಂದು ಹೇಳಿದರು.
ಒಟ್ಟು 45 ದಿನಗಳ ಕಾಲ ನಡೆಯುವ ಜನಗಣತಿಯ ಜತೆಗೆ ಎನ್.ಪಿ.ಆರ್ ಯನ್ನು ಮಾಡಲಾಗುತ್ತದೆ. ಗಣತಿಯ ಸಂದರ್ಭದಲ್ಲಿ ಸುಮಾರು 21 ದಾಖಲಾತಿಗಳನ್ನು ನೀಡಬಹುದು. ಮುಖ್ಯವಾಗಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಾಸ್‍ಪೋರ್ಟ್ ಸಂಖ್ಯೆ ಹಾಗೂ ಇನ್ನಿತರ ಹಲವಾರು ದಾಖಲಾತಿಗಳನ್ನು ನೀಡಬಹುದು ಎಂದರು.
ಇದೇ ವೇಳೆ ಅಧಿಕಾರಿಗಳಿಗೆ ಜನಗಣತಿಗೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನದ ಬಗ್ಗೆ ಹಾಗೂ ಯಾವ ರೀತಿ ಮೊಬೈಲ್ ಮೂಲಕ ಜನಗಣತಿ ನಡೆಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಟಿ.ಯೋಗೇಶ್, ಮಂಡ್ಯ ಉಪವಿಭಾಗಾಧಿಕಾರಿಯಾದ ಸೂರಜ್, ಉಪವಿಭಾಗಾಧಿಕಾರಿಯಾದ ಶೈಲಜ ಹಾಗೂ ತಾಲ್ಲೂಕು ಮಟ್ಟದ ತಹಶೀಲ್ದಾರ್‍ಗಳು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...