ನೀರಿನಾಸರೆಗಳ ಗಣತಿ : ಸೆ.23 ರಿಂದ ತರಬೇತಿ ಅಕ್ಟೋಬರ್ 25 ರೊಳಗೆ ಜಿಲ್ಲೆಯ ಗಣತಿ ಕಾರ್ಯ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Source: SO News | By Laxmi Tanaya | Published on 19th September 2020, 8:03 AM | State News | Don't Miss |

ಧಾರವಾಡ : ಭಾರತ ಸರ್ಕಾರದ ಜಲಸಂಪನ್ಮೂಲ ಇಲಾಖೆಯು ರಾಜ್ಯದ ಜಲಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣಕ್ಕಾಗಿ ಸಣ್ಣ ನೀರಾವರಿ ಗಣತಿ ನಡೆಸುತ್ತಿದೆ. ನೀರಿನ ಆಸರೆಗಳಾದ ಕಡಲು, ಮಹಾಸಾಗರ, ಕಾಲುವೆ, ತೊರೆ, ಕೆರೆ, ಕುಂಟೆಗಳನ್ನು ಸಮೀಕ್ಷೆ ಮಾಡಲು ಜಿಲ್ಲೆಯ ಸಣ್ಣನೀರಾವರಿ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತಿತರ ಸಂಬಂಧಿತ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಸೆ.23 ರಿಂದ 25 ರವರೆಗೆ ತಾಲೂಕುವಾರು ತರಬೇತಿ ಆಯೋಜಿಸಲಾಗುವುದು. ಅಕ್ಟೋಬರ್ 25 ರೊಳಗೆ ಗಣತಿಯ ಸಮಗ್ರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ನೀರಿನಾಸರೆಗಳ ಗಣತಿ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ತಾಲೂಕುಗಳ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಆಯೋಜಿಸಬೇಕು. ಸಾಂಖ್ಯಿಕ ಸಂಗ್ರಹಣಾ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ಸೆ.23 ರಂದು ಹುಬ್ಬಳ್ಳಿ-ಧಾರವಾಡ, ಸೆ.24 ರಂದು ನವಲಗುಂದ-ಅಣ್ಣಿಗೇರಿ, ಸೆ.25 ರಂದು ಕಲಘಟಗಿ  ತಾಲೂಕುಗಳಲ್ಲಿ ತರಬೇತಿ ಕಾರ್ಯಕ್ರಮಗಳು ಜರುಗಲಿವೆ. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಹೆಸ್ಕಾಂ, ಪೌರಾಡಳಿತ, ನಗರಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿ, ಪಂಚಾಯತರಾಜ್ ಇಂಜಿನೀಯರಿಂಗ್ ವಿಭಾಗ, ಸಣ್ಣ ನೀರಾವರಿ ಮತ್ತಿತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿ ಪಡೆದು, ಗಣತಿ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಮನೋಹರ ಮಂಡೋಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...