2 ಲಕ್ಷ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಸ್ಥಾಪನೆ; ಕೇಂದ್ರ ಸಂಪುಟ ಒಪ್ಪಿಗೆ

Source: Vb | By I.G. Bhatkali | Published on 16th February 2023, 11:46 AM | National News |

ಹೊಸದಿಲ್ಲಿ: ಎರಡು ಲಕ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಸ್ಥಾಪಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ದೇಶದಲ್ಲಿ ಸಹಕಾರ ಚಳವಳಿಯನ್ನು ಸಬಲಗೊಳಿಸಲು ಹಾಗೂ ಅದರ ವ್ಯಾಪ್ತಿಯನ್ನು ತಳಮಟ್ಟದ ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಈ ಅನುಮತಿ ನೀಡಿದೆ.

ಹೊಸದಿಲ್ಲಿಯಲ್ಲಿ ಬುಧವಾರ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಹಾಗೂ ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್, ಆರಂಭದಲ್ಲಿ 2 ಲಕ್ಷ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (ಪಿಎಸಿಎಸ್), ಕಾರ್ಯಸಾಧ್ಯವಾದ ಡೈರಿ ಸಹಕಾರಿ ಸೊಸೈಟಿ ಹಾಗೂ ಮೀನುಗಾರಿಕೆ ಸಹಕಾರಿ ಸೊಸೈಟಿಗಳನ್ನು ಈ ಸೌಲಭ್ಯ ಇಲ್ಲದ ಪ್ರತಿಯೊಂದು ಪಂಚಾಯತ್‌ ಗಳಲ್ಲಿ ಸ್ಥಾಪಿಸಲಾಗುವುದು. ಈ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (ಪಿಎಸಿಎಸ್), ಡೈರಿ ಸಹಕಾರಿ ಸೊಸೈಟಿ ಹಾಗೂ ಮೀನುಗಾರಿಕೆ ಸಹಕಾರಿ ಸೊಸೈಟಿಯನ್ನು ಮುಂದಿನ ಐದು ವರ್ಷಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇದರಿಂದ ಮೂಲ ಸೌಕರ್ಯಗಳನ್ನು ಸ್ಥಾಪಿಸಲು ಹಾಗೂ ಆಧುನಿಕೀಕರಿಸಲು ಸಹಕಾರಿ ಸೊಸೈಟಿಗಳಿಗೆ ಸಾಧ್ಯವಾಗಲಿದೆ. ಇದು ಸಹಕಾರಿ ಕ್ಷೇತ್ರವನ್ನು ಸಬಲಗೊಳಿಸಲಿದೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಅವರು ಹೇಳಿದರು.

4,800 ಕೋಟಿ ರೂ. ಹಣಕಾಸು ಹಂಚಿಕೆ ಯೊಂದಿಗೆ 2022-23ರಿಂದ 2025-26 ರವರೆಗಿನ ವಿತ್ತ ವರ್ಷಗಳಲ್ಲಿ ಕೇಂದ್ರ ಪ್ರಾಯೋಜಿತ ಅದ್ಭುತ ಗ್ರಾಮಗಳ ಯೋಜ ನೆಗೆ ಕೂಡ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

ಇದು ಉತ್ತರದ ಭೂ ಗಡಿಯಲ್ಲಿರುವ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜೀವನಾಧಾ ರದ ಅವಕಾಶಗಳಿಗೆ ಕಾರಣವಾಗಲಿದೆ. ಅಲ್ಲದೆ, ಜನರ ಜೀವನ ಗುಣಮಟ್ಟವನ್ನು ಸುಧಾರಿಸಲಿದೆ ಹಾಗೂ ಉತ್ತರ ಗಡಿಯಲ್ಲಿರುವ ಗ್ರಾಮಗಳನ್ನು ಒಳಗೊಂಡು ಪ್ರಗತಿಗೆ ಕಾರಣವಾಗಲಿದೆ ಎಂದು ಠಾಕೂರ್ ಹೇಳಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...