ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

Source: ANI | By MV Bhatkal | Published on 20th June 2021, 12:09 PM | National News |


ನವದೆಹಲಿ:  ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ಕಠಿಣ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಶನಿವಾರ ರಾಜ್ಯ ಸರ್ಕಾರಗಳಿಗೆ ಹೇಳಿದೆ.
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ದೇಶದ ಹಲವೆಡೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
ವೈದ್ಯರು ಮತ್ತು ಡಾಕ್ಟರ್ ಮೇಲೆ ಹಲ್ಲೆ, ಬೆದರಿಕೆ ಘಟನೆಗಳು ಅವರ ನೈತಿಕ ಸ್ಥೈರ್ಯ ಕುಂದಿಸುವ ಹಾಗೂ ಅಭದ್ರತೆ ಭಾವ ಮೂಡಿಸುವ ಸಾಧ್ಯತೆಯಾಗಿದೆ. ಇದು ಆರೋಗ್ಯ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಲ್ಲಾ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ, ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ ಎಂದು ಗೃಹ ಕಾರ್ಯದರ್ಶಿ ಹೇಳಿದ್ದಾರೆ. ಹಲ್ಲೆಕೋರರ ವಿರುದ್ಧದ ಎಫ್ ಐಆರ್ ದಾಖಲಿಸಬೇಕು, ಇಂತಹ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಬೇಕು, ಸಾಂಕ್ರಾಮಿಕ ಕಾಯಿಲೆಗಳ (ತಿದ್ದುಪಡಿ) ಕಾಯ್ದೆ 2020 ರ ಅನ್ವಯ ಅವರಿಗೆ ಶಿಕ್ಷೆ ಕೊಡಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಕಾನೂನಿನ ಪ್ರಕಾರ, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ಒಂದು ವೇಳೆ ಕರ್ತವ್ಯ ನಿರತ ವೈದ್ಯರ ಮೇಲೆ ಹಿಂಸೆಯಂತಹ ಘಟನೆಗಳು ನಡೆದರೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಐದು ಲಕ್ಷ ರೂ.ವರೆಗೂ ದಂಡ ವಿಧಿಸಬಹುದಾಗಿದೆ.

 

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...