ಭೂತಾನ್‌ನಿಂದ ಅಡಿಕೆ ಆಮದಿಗೆ ಕೇಂದ್ರ ಸರಕಾರ ಅನುಮತಿ; ಕನಿಷ್ಠ ಆಮದು ಬೆಲೆಯ ಷರತ್ತಿಲ್ಲ; ಕರ್ನಾಟಕದ ಅಡಿಕೆ ಬೆಳೆಗಾರರಲ್ಲಿ ನಡುಕ

Source: Vb | By I.G. Bhatkali | Published on 30th September 2022, 9:17 AM | State News | National News |

ಹೊಸದಿಲ್ಲಿ: ಭೂತಾನ್‌ನಿಂದ ಪ್ರತೀ ವರ್ಷ ಕನಿಷ್ಠ ಆಮದು ಬೆಲೆ (ಎಮ್‌ಐಪಿ)ಯ ಷರತ್ತಿಲ್ಲದೆ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಲು ಸರಕಾರ ಬುಧವಾರ ಅನುಮೋದನೆ ನೀಡಿದೆ. ಸರಕಾರದ ಈ ನಿರ್ಧಾರವು ಕರ್ನಾಟಕ ಸೇರಿದಂತೆ ದೇಶಾದ್ಯಂತದ ಅಡಿಕೆ ಬೆಳೆಗಾರರಲ್ಲಿ ನಡುಕಹುಟ್ಟಿಸಿದೆ.

2017ರಲ್ಲಿ, ದೇಶದ ಅಡಿಕೆ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಪ್ರತೀ ಕಿಲೋ ಗ್ರಾಮ್ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು 251 ರೂ.ಗೆ ನಿಗದಿಪಡಿಸಿತ್ತು. 2018ರಲ್ಲಿ ಬೆಲೆಯು 251 ರೂ. ಗಿಂತ ಹೆಚ್ಚಿದ್ದರೆ ಯಾವುದೇ ಮಾದರಿಯ ಅಡಿಕೆಯನ್ನು ಆಮದು ಮಾಡಲು ಸರಕಾರ ಅವಕಾಶ ನೀಡಿತ್ತು. ಆದಾಗ್ಯೂ, ಬೆಲೆಯು ಕನಿಷ್ಠ ಆಮದು ಬೆಲೆಗಿಂತ ಕಡಿಮೆಯಿದ್ದರೆ ಅಂಥ ಅಡಿಕೆಗಳ ಆಮದನ್ನು ನಿಷೇಧಿಸಲಾಗಿತ್ತು. ಕನಿಷ್ಠ ಆಮದು ಬೆಲೆಯೆಂದರೆ, ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಆಮದು ಮಾಡಲು ಅವಕಾಶವಿಲ್ಲ. ಜೈಗಾಂವ್‌ನಲ್ಲಿರುವ ಭೂಸುಂಕ ನಿಲ್ದಾಣ (ಐಎನ್‌ಜೆಐಜಿಬಿ)ದ ಮೂಲಕ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶವಿದೆ ಎಂದು ವಿದೇಶ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ)ದ ಅಧಿಸೂಚನೆಯೊಂದು ತಿಳಿಸಿದೆ. ಇಂಥ ಆಮದುಗಳಿಗೆ ಡಿಜಿಎಫ್‌ಟಿ ನೀಡುವ ನೋಂದಣಿ ಪ್ರಮಾಣ ಪತ್ರದ ಅಗತ್ಯವಿದೆ.

“ಭೂತಾನ್‌ನಿಂದ ಪ್ರತೀ ವರ್ಷ17,000 ಟನ್ ಹೊಸ ಅಡಿಕೆಯನ್ನು ಕನಿಷ್ಠ ಆಮದು ಬೆಲೆಯ ಷರತ್ತಿಲ್ಲದೆ ಎಲ್‌ಎಸ್ ಜೈಗಾಂವ್ (ಐಎನ್‌ಜೆಐಜಿಬಿ)ಮೂಲಕ ಆಮದು ಮಡಿಕೊಳ್ಳಲು ಅನುಮತಿ ನೀಡಲಾಗಿದೆ. ಇದಕ್ಕಾಗಿ ಡಿಜಿಎಫ್‌ಟಿ ನೀಡುವ ನೋಂದಣಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು'' ಎಂದು ಅಧಿಸೂಚನೆ ತಿಳಿಸಿದೆ.

2022-23ನೇ ಸಾಲಿನ ದ್ವಿತೀಯಾರ್ಧದಲ್ಲಿ ಭೂತಾನ್‌ನಿಂದ 8,500 ಟನ್ ಹೊಸಅಡಿಕೆಯನ್ನು ಕನಿಷ್ಠ ಆಮದು ಬೆಲೆಯ ಷರತ್ತಿಲ್ಲದೆ ಆಮದು ಮಾಡಿಕೊಳ್ಳ ಬಹುದಾಗಿದೆ ಎಂದು ಸಾರ್ವಜನಿಕ ಅಧಿಸೂಚನೆ ಹೇಳಿದೆ. 

2023-24ನೇ ಸಾಲಿನಲ್ಲಿ, ಒಟ್ಟು 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ ಎಂದು ಅದು ತಿಳಿಸಿದೆ.

ಕೇಂದ್ರ ಸರಕಾರದ ಈ ನಿರ್ಧಾರವು ಭಾರತದ ಅಡಿಕೆ ಬೆಳೆಗಾರರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಬೆದರಿಕೆಯನ್ನು ಒಡ್ಡಿದೆ. ಈ ನಿರ್ಧಾರದಿಂದಾಗಿ ಕರ್ನಾಟಕ ಸೇರಿದಂತೆ ಭಾರತದಲ್ಲಿ ಅಡಿಕೆಯ ಬೆಲೆ ತೀವ್ರವಾಗಿ ಕುಸಿಯುವ ಸಾಧ್ಯತೆಯಿದೆ ಎಂಬ ಭೀತಿಯನ್ನು ರೈತರು ವ್ಯಕ್ತಪಡಿಸಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...