ಆತಂಕವಾದಿ ಸಂಘಟನೆಗಳಿಗೆ ಕೇಂದ್ರ ಸರಕಾರ ಬೆಂಬಲ; ವಿದ್ಯಾರ್ಥಿ ನಾಯಕ ಆರೋಪ

Source: sonews | By Staff Correspondent | Published on 6th September 2018, 11:30 PM | State News | National News | Special Report |

ಬೆಂಗಳೂರು: ದೇಶದಲ್ಲಿ ವಿವಿಧ ಹೆಸರುಗಳ ಮೂಲಕ ಆತಂಕವಾದಿ ಸಂಘಟನೆಗಳು ಕೆಲಸ ಮಾಡುತ್ತಿದ್ದು, ಅದಕ್ಕೆ ಕೇಂದ್ರ ಸರಕಾರ ನೇರವಾಗಿ ಬೆಂಬಲ ನೀಡುತ್ತಿದೆ ಎಂದು ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಹೇಳಿದ್ದಾರೆ.

 

ಶುಕ್ರವಾರ ನಗರದ ದಾರು ಸಲಾಮ್ ಬಿಲ್ಡಿಂಗ್‌ನಲ್ಲಿ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಏರ್ಪಡಿಸಿದ್ದ ‘ಪ್ರಜಾಪ್ರಭುತ್ವ ಉಳಿವಿಗಾಗಿ’ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿಂದು ಸಂವಿಧಾನದ ಮೂಲ ಆಶಯಗಳನ್ನು ಧಿಕ್ಕರಿಸಿ, ಆರೆಸ್ಸೆಸ್‌ನ ರಾಷ್ಟ್ರೀಯವಾದವನ್ನು ಹೇರಲು ಮುಂದಾಗುತ್ತಿದ್ದಾರೆ. ಆದರೆ, ನಮಗೆ ಇಂದು ಬೇಕಿರುವುದು ನೈಜ ರಾಷ್ಟ್ರವಾದ ಎಂದು ತಿಳಿಸಿದರು.

ದೇಶದಲ್ಲಿ ಅಧಿಕಾರದಲ್ಲಿರುವ ಸರಕಾರ ಪ್ರಜಾಪ್ರಭುತ್ವವವನ್ನೇ ಬುಡಮೇಲು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ದೇಶದ ಯುವ ಜನತೆ ಉದ್ಯೋಗದ ಬಗ್ಗೆ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಶ್ನೆ ಮಾಡಿದರೆ, ವ್ಯವಸ್ಥಿತವಾಗಿ ಜನರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಅನಗತ್ಯವಾಗಿ ಗೋ ರಕ್ಷಣೆಯನ್ನು ತರಲಾಗುತ್ತಿದೆ. ಈ ಮೂಲಕ ಇಡೀ ಚರ್ಚೆಯ ದಿಕ್ಕನ್ನು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ರೈತರ, ಮಹಿಳೆಯರ, ಯುವಜನತೆಯ, ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಎಲ್ಲಿಯೂ ಚಕಾರ ಎತ್ತುತ್ತಿಲ್ಲ. ಅಲ್ಲದೆ, ಇಂದು ಅಮೆರಿಕದ ಕರೆನ್ಸಿ ಮುಂದೆ ಭಾರತದ ಕರೆನ್ಸಿ ಇಳಿಮುಖವಾಗುತ್ತಿದೆ. ಜಿಡಿಪಿ ಮೌಲ್ಯ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಆದರೂ, ಅನಗತ್ಯ ವಿಷಯಗಳನ್ನು ಚರ್ಚೆಯ ಮುನ್ನೆಲೆಗೆ ತರುವ ಮೂಲಕ ಭಾರತ ಅಭಿವೃದ್ಧಿಯಾಗುತ್ತಿದೆ ಎಂದು ನಂಬಿಸಲಾಗುತ್ತಿದೆ ಎಂದು ಹೇಳಿದರು.

ಮತಹಾಕಿ ಗೆಲ್ಲಿಸಿದ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಕಾರ್ಪೋರೇಟ್ ಕಂಪೆನಿಗಳು, ಅದಾನಿ, ಅಂಬಾನಿಯನ್ನು ಉದ್ಧಾರ ಮಾಡುತ್ತಿದ್ದಾರೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಸಂಬಂಧಿಕರು ಅಭಿವೃದ್ಧಿಯಾಗುತ್ತಿದ್ದಾರೆ. ಆದರೂ, ರಾಷ್ಟ್ರೀಯತೆ ಬಗ್ಗೆ ಪಾಠ ಮಾಡುತ್ತಾರೆ. ಪ್ರಧಾನಿಗೆ ರಾಷ್ಟ್ರದ ಬಗ್ಗೆ, ಇಲ್ಲಿನ ಜನರ ಬಗ್ಗೆ ಗೌರವವಿದ್ದರೆ ಮೊದಲು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ 60 ಸಹಾಯಕರ ಹುದ್ದೆಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿಯೂ ಪಿಎಚ್‌ಡಿ, ಉನ್ನತ ಶಿಕ್ಷಣ ಪಡೆದವರೇ ಅಧಿಕವಾಗಿದ್ದಾರೆ. ಇದು ಅಭಿವೃದ್ಧಿಯ ಉದಾಹರಣೆಯಾಗಿದೆ. ಮತ್ತೊಂದು ಕಡೆ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಯಲ್ಲಿ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿಯೇ ಹೆಚ್ಚಿದೆ. ಇದು ಬಿಜೆಪಿ ಸರಕಾರದ ಅಧಿಕಾರದ ಅವಧಿಯ ನೈಜ ಮುಖವಾಡಗಳು ಎಂದು ಅವರು ತಿಳಿಸಿದರು.

ಮುಂದಿನ ಎಂಟು ತಿಂಗಳಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯು ಆರೆಸ್ಸೆಸ್-ಬಿಜೆಪಿ-ಮೋದಿ ಹಾಗೂ ರೈತರು-ಕೃಷಿ, ಕೂಲಿಕಾರ್ಮಿಕರು-ವಿದ್ಯಾರ್ಥಿ ಮತ್ತು ಯುವಜನರು-ಮಹಿಳೆಯರ ನಡುವಿನ ಸಂಘರ್ಷವಾಗಬೇಕಿದೆ. ಇಲ್ಲದಿದ್ದರೆ, ಮತ್ತೊಮ್ಮೆ ದೇಶದಲ್ಲಿ ಕೋಮುವಾದಿ ಶಕ್ತಿಗಳು ಅಧಿಕಾರ ಹಿಡಿಯಲಿದ್ದಾರೆ. ಅದಕ್ಕೆ ಅವಕಾಶ ನೀಡದಂತೆ ಪ್ರತಿಯೊಂದು ಸಮಸ್ಯೆ ಹಾಗೂ ಹಿಂದಿನ ಚುನಾವಣೆಯಲ್ಲಿ ಮೋದಿ ದೇಶದ ಜನರಿಗೆ ನೀಡಿದ ಆಶ್ವಾಸನೆಗಳನ್ನು ಮನದಟ್ಟು ಮಾಡಿಕೊಡಬೇಕಿದೆ ಎಂದು ಅವರು ಕರೆ ನೀಡಿದರು.

ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ಮಾತನಾಡಿ, ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಇಲ್ಲವಾಗಿಸುವ ಹುನ್ನಾರ ಮಾಡುತ್ತಿದ್ದು, ಮನುಸ್ಮೃತಿಯನ್ನು ರಾಷ್ಟ್ರಗ್ರಂಥ ಎಂದು ಬಿಂಬಿಸಲು ಮುಂದಾಗಿದೆ. ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ನಾಶ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ರಾಮಮಂದಿರ ನಿರ್ಮಾಣ, ಕಾಶ್ಮೀರ ವಿವಾದ ಹಾಗೂ ಪಾಕಿಸ್ತಾನವನ್ನು ಬೈಯುವುದು ಸೇರಿದಂತೆ ಹಲವು ಕೋಮುವಾದಿ ವಿಧಾನಗಳನ್ನು ಅನುಸರಿಸಲು ಅಗತ್ಯ ತಯಾರಿ ಮಾಡಿಕೊಂಡಿದೆ. ಅಲ್ಲದೆ, ದೇಶದ ಬಹುಸಂಖ್ಯಾತರನ್ನು ಮರುಳು ಮಾಡುವ ನಿಟ್ಟಿನಲ್ಲಿ ದೌರ್ಜನ್ಯ ತಡೆ ಕಾಯ್ದೆಯನ್ನು ನಿರ್ನಾಮ ಮಾಡುವ ನಾಟಕವಾಡುತ್ತಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಗದ ರೀತಿಯಲ್ಲಿ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಒಟ್ಟಾಗಿ ಕೆಲಸ ಮಾಡಬೇಕು. ಮತಗಳು ವಿಭಜನೆಯಾಗದಂತೆ ಹಾಗೂ ಕೋಮುವಾದಿ ಶಕ್ತಿಗಳಿಗೆ ಸಿಗದಂತೆ ಮಾಡಲು ತಂತ್ರಗಳನ್ನು ಅನುಸರಿಸಬೇಕು. ಆ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೂರ್ ಶ್ರೀಧರ್, ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೇಶದಲ್ಲಿ ನಮಗೆ ನ್ಯಾಯ ಬೇಕಾದರೆ ನ್ಯಾಯಾಂಗದ ಎದುರು ನಿಲ್ಲುತ್ತೇವೆ. ಆದರೆ, ಇಂದು ನ್ಯಾಯಾಧೀಶರೇ ಜನರ ಎದುರು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಯುವುದಾದರೂ ಹೇಗೆ ಎಂಬ ಅನುಮಾನ ಕಾಡುತ್ತಿದೆ. ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ಘಟನೆ ಭಾರತದಲ್ಲಿ ನಡೆದಿರುವುದು.

-ಜಿಗ್ನೇಶ್ ಮೇವಾನಿ, ಶಾಸಕ ಹಾಗೂ ದಲಿತ ನಾಯಕ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...