ಕೋವಿಡ್ ಮೂರನೇ ಅಲೆ ಎದುರಿಸಲು ‘ಸಮರೋಪಾದಿಯ ಸಿದ್ಧತೆ‘: ಕೇಜ್ರಿವಾಲ್

Source: ANI | By MV Bhatkal | Published on 12th June 2021, 7:56 PM | National News | Don't Miss |

ನವದೆಹಲಿ: ‘ಕೋವಿಡ್‌–19’ ಪಿಡುಗಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಅಲೆಯಿಂದ ಉಂಟಾಗುವ ಪರಿಣಾಮವನ್ನು ಎದುರಿಸಲು ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಶನಿವಾರ ಹೇಳಿದ್ದಾರೆ. 
ಆನ್‌ಲೈನ್ ಮೂಲಕ ದೆಹಲಿಯ ಒಂಬತ್ತು ಆಸ್ಪತ್ರೆಗಳಲ್ಲಿ 22 ಹೊಸ ಪಿಎಸ್‌ಎ ಆಮ್ಲಜನಕ ಉತ್ಪಾದಕ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂರನೇ ಅಲೆಯ ಬಗ್ಗೆ ಬ್ರಿಟನ್‌ನಿಂದ ಆತಂಕಕಾರಿ ಸೂಚನೆಗಳು ಬರುತ್ತಿವೆ.  ಆ ದೇಶದಲ್ಲಿ ಶೇ 45 ರಷ್ಟು ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ, ನಾವು ಈ ಸಮಯದಲ್ಲಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದರು.
‘ಕೋವಿಡ್‌ನ ಮೂರನೇ ಅಲೆ ಬಾರದಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಆದರೆ ಅದು ಸಂಭವಿಸಿದಲ್ಲಿ, ದೆಹಲಿಯ ನಾಗರಿಕರು ಮತ್ತೆ ಒಗ್ಗಟ್ಟಾಗಿ ಹೋರಾಡಬೇಕಿದೆ‘ ಎಂದು ಅವರು ಹೇಳಿದರು.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...