ಮತದಾರರ ಮಾಹಿತಿಯನ್ನು ಪರಿಶೀಲಿಸಿ: ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ

Source: SO News | By Laxmi Tanaya | Published on 3rd September 2021, 10:04 AM | State News | Don't Miss |

ಮಂಡ್ಯ :  ಬಾಕಿ ಇರುವ ಡಿ.ಎಸ್.ಸಿ ವಿಲೇವಾರಿ ಮತಗಟ್ಟೆ ಮಟ್ಟದ ಅಧಿಕಾರಿಗಳು ನವೆಂಬರ್ 08 ರೊಳಗೆ ಮನೆ ಮನೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಿ ಹಾಗೂ ಮತದಾರರ ಸಂಖ್ಯೆಗೆ ಅನುಗುಣವಾಗಿ ಮತದಾನ ಕೇಂದ್ರಗಳ ಪುನರ್ ವಿಂಗಡಣೆ ಮಾಡಿ  ಎಂದು ಅಪರ ಜಿಲ್ಲಾಧಿಕಾರಿ ಶೈಲಜಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ 2022 ರ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿ ಪ್ರಕಟಣೆ ಸಂಬಂಧ ನವೆಂಬರ್ 08 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ನೊಂದಣಾಧಿಕಾರಿಗಳ ಕಛೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು ಎಂದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ನೊಂದಾಯಿತ ರಾಜಕೀಯ ಪಕ್ಷಗಳಿಗೆ ಒಂದು ಪ್ರತಿಯನ್ನು ಉಚಿತವಾಗಿ ನೀಡಿ ಎಂದು ಹೇಳಿದರು.

ನವೆಂಬರ್ 08 ರಿಂದ ಡಿಸೆಂಬರ್ 08 ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಮತ್ತು ಅಕ್ಷೇಪಣೆಗಳು ಇದ್ದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ, ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.

ಮತದಾರರ ವಿಶೇಷ ನೊಂದಣಿಯಡಿ ನವೆಂಬರ್ ತಿಂಗಳಿನ 07, 14, 21, 28 ರಂದು  ನೊಂದಾಯಿಸಿಕೊಳ್ಳಿ ಎಂದರು.

ಡಿಸೆಂಬರ್ 27 ರೊಳಗೆ ಕರಡು ಮತದಾರರ‌ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಮತ್ತು ಅಕ್ಷೇಪಣೆಗಳು ಇದ್ದಲ್ಲಿ ಇವುಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಲಾಗುವುದು ಎಂದರು.

13 ಜನವರಿ 2022 ರಂದು ಅಂತಿಮ‌ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

01 ಜನವರಿ 2022 ಕ್ಕೆ 18 ವರ್ಷ ತುಂಬುವಂತಹ ಯುವಕ/ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6  ರೊಂದಿಗೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗೆ ಸಲ್ಲಿಸುವುದು ಎಂದರು.

ಮೃತ ಪಟ್ಟಿರುವ, ಸ್ಥಳಾಂತರಗೊಂಡಿರುವ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲು ನಮೂನೆ -7 ರೊಂದಿಗೆ ಸೂಕ್ತ ದಾಖಲಾತಿ ಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗೆ ಸಲ್ಲಿಸಿ ಎಂದರು.

ಮತದಾರರ ವಿವಿಧ ಲೋಪದೋಷಗಳನ್ನು ತಿದ್ದುಪಡಿ ಮಾಡಲು ನಮೂನೆ -8 ರೊಂದಿಗೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗೆ ಸಲ್ಲಿಸಿ ಎಂದು ಹೇಳಿದರು.

ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವರ್ಗಾವಣೆಗೊಳ್ಳಬೇಕಾದ ಮತದಾರರನ್ನು ವರ್ಗಾವಣೆ ಮಾಡಲು ನಮೂನೆ 8ಎ ರೊಂದಿಗೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ಸಂಬಂಧ ಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗೆ ಸಲ್ಲಿಸಿ ಎಂದರು.

ಮತದಾರನೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಬದಲಾವಣೆಗೊಂಡಲ್ಲಿ ಹಾಲಿ ಇರುವ ಮತದಾರರ ಪಟ್ಟಿಯ ವಿಧಾನಸಭಾ ಕ್ಷೇತ್ರದಲ್ಲಿ ನಮೂನೆ-7 ನ್ನು ಸಲ್ಲಿಸಿ,  ಸ್ವೀಕೃತಿಯೊಂದಿಗೆ ಸೇರ್ಪಡೆಯಾಗಬೇಕಾದ ಮತದಾರರ ಪಟ್ಟಿಯ ವಿಧಾನಸಭಾಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗೆ ನಮೂನೆ-6 ರೊಂದಿಗೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ಸಲ್ಲಿಸಿ ಎಂದರು.

ಮತದಾರರ ಪಟ್ಟಿಗೆ ಸೇರ್ಪಡೆಯಾಗದ 20 ವರ್ಷ ಮೇಲ್ಪಟಂತಹ ಯುವಕ, ಯುವತಿಯರನ್ನು ನೂತನವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಸ್ವಯಂದೃಢೀಕರಣ ಪತ್ರವನ್ನು ನೀಡಲಾಗುವುದು ಎಂದರು‌.

 ಸಭೆಯಲ್ಲಿ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ , ಬಿಜೆಪಿಯ ರಮೇಶ್, ಬಿಎಸ್ ಪಿಯ ಜಿಲ್ಲಾ ಕಚೇರಿಯ ದಿನೇಶ್ , ಜೆಡಿಎಸ್ ನ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನವೀನ್ ಕುಮಾರ್ ಡಿ.ಆರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...