ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

Source: SO News | By Laxmi Tanaya | Published on 17th October 2021, 1:26 PM | State News |

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಇಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರೇ ಜಿಲ್ಲೆಯ ನ್ಯಾಮತಿ ತಾಲ್ಲೂಕು ಸುರಹೊನ್ನೆ ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅತ್ಯಗತ್ಯ. ಇದರ ಜೊತೆಗೆ ಸರ್ಕಾರವನ್ನು ಹಳ್ಳಿಗಳತ್ತ, ಜನರ ಮನೆ ಬಾಗಿಲಿಗೆ ಕೊಂಡೊಯ್ದು, ಅವರ ಸಮಸ್ಯೆ ಗೆ ಸ್ಥಳೀಯ ವಾಗಿಯೇ ಪರಿಹಾರ ಕಂಡುಕೊಳ್ಳುವಂತಾಗಲು ಕಂದಾಯ ಸಚಿವರಾದ ಆರ್ ಅಶೋಕ್ ಅವರು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಡೆ ಎಂಬ ವಿನೂತನ ಕಾರ್ಯಕ್ರಮ ಪ್ರಾರಂಭಿಸಿ,  ಯಶಸ್ವಿಯಾಗಿ ನೆರವೇರಿಸಲಾಗಿದೆ. ಆದರೆ ಕೊರೊನಾ ಹಿನ್ನೆಲೆ ಗ್ರಾಮ ವಾಸ್ತವ್ಯಕ್ಕೆ ಹಿನ್ನೆಡೆಯಾಗಿತ್ತು. ಇದೀಗ ಮತ್ತೆ ಗ್ರಾಮ ವಾಸ್ತವ್ಯಕ್ಕೆ ಕಾಲ ಕೂಡಿ ಬಂದಿದೆ.
ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಭಾಗವಹಿಸಿ ಪುನಃ ಈ ಕಾರ್ಯಕ್ರಮ ಕ್ಕೆ ದಾವಣಗೆರೆ ಜಿಲ್ಲೆ ಯಲ್ಲಿ ಚಾಲನೆ ನೀಡಿರುವುದು ವಿಶೇಷವಾಗಿದೆ.
ಈ ಬಗ್ಗೆ ಸ್ವತಃ ಸಿಎಂ ಅವರೇ ಆಸಕ್ತಿ ತೋರಿದ್ದು, ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡುತ್ತಿದ್ದಾರೆ. 

ದಾವಣಗೆರೆ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕುಂದೂರು, ಸುರಹೊನ್ನೆ ಗ್ರಾಮಗಳಲ್ಲಿ ಇಂದು ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಸಿಎಂ ಚಾಲನೆ ನೀಡಿ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಿದರು.

 ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಮಾಡಳ್ ವಿರೂಪಾಕ್ಷಪ್ಪ, ಪ್ರೊ. ಲಿಂಗಣ್ಣ, ಡಿಸಿ. ಮಹಾಂತೇಶ್ ಬೀಳಗಿ, ಸಿಇಒ ವಿಜಯ ಮಹಾಂತೇಶ್, ಎಸ್.ಪಿ. ರಿಷ್ಯಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...