ಚಿಕ್ಕಮಗಳೂರು:2 ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ:ಮೂವರ ದುರ್ಮರಣ

Source: so news | By Manju Naik | Published on 19th April 2019, 11:43 PM | State News | Don't Miss |

 

ಚಿಕ್ಕಮಗಳೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂರು ಮಂದಿ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದ ಮುನಿರಾಜು (65), ಜ್ಯೋತಿ (14 ) ಹಾಗೂ ಸುಬ್ಬಲಕ್ಷ್ಮಿ (60) ಎಂಬುವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಮರಳುವಾಗ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read These Next