ಧಾರವಾಡ: ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ ಕಾರ್ಯಕ್ರಮ

Source: SO News | By Laxmi Tanaya | Published on 14th November 2020, 8:54 PM | State News |

ಧಾರವಾಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ ಆದೇಶದಂತೆ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ ಕುಸುಗಲ್ಲ ಇವರ ಸಂಯುಕ್ತ  ಆಶ್ರಯದಲ್ಲಿ  ಕುಸುಗಲ್ಲ ಗ್ರಾಮದಲ್ಲಿ ಆಯೋಜಿಸಿದ್ದ ಓದುವ ಬೆಳಕು ಪ್ರಚಾರ ವಾಹನಕ್ಕೆ   ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸುಶೀಲಾ ಹಾಗೂ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರು ಹಸಿರು ಬಾವುಟ ಮೂಲಕ ಚಾಲನೆ‌ ನೀಡಿದರು.

 ನಂತರ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಮ್.ಎಲ್. ಹಂಚಾಟೆ, ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕಾ ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ಜಿಲ್ಲಾ ಪಂಚಾಯತ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

Read These Next

ಅರಣ್ಯ ಭೂಮಿ ಖಾಸಗಿಯವರಿಗೆ ನೀಡಲು ಮುಂದಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ

ಅರಣ್ಯ ಭೂಮಿ ಖಾಸಗಿಯವರಿಗೆ ನೀಡಲು ಮುಂದಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ