ಉತ್ತಮ ಆರೋಗ್ಯ ಹಾಗೂ ಬೆಳವಣಿಗೆಗೆ ಜಂತು ನಿವಾರಕ ಮಾತ್ರೆ ಮಕ್ಕಳಿಗೆ ಅಗತ್ಯ : ಜಿಲ್ಲಾಧಿಕಾರಿ ದೀಪಾ ಚೋಳನ್

Source: so news | Published on 12th February 2020, 12:29 AM | State News | Don't Miss |

 

ಧಾರವಾಡ: ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಸಮುದಾಯದ ಪಾತ್ರ ಬಹುಮುಖ್ಯ. ಅವರ ಮಾನಸಿಕ ಹಾಗೂ ದೈಹಿಕ ಸದೃಡತೆಯನ್ನು ದೇಶದ ಅಭಿವೃದ್ಧಿ ಅವಲಂಬಿಸಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಬೆಳವಣಿಗೆ ಕಲ್ಪಿಸಲು ಪಾಲಕರು ತಪ್ಪದೆ ಜಂತು ನಿವಾರಕ ಮಾತ್ರೆ ನೀಡಬೇಕು. ಇದರಿಂದ ಸರಿಯಾದ ಪಚನವಾಗಿ ದೇಹಕ್ಕೆ ಪೌಷ್ಠಿಕಾಂಶ ದೊರಕುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಅವರು ಇಂದು ಬೆಳಿಗ್ಗೆ ಕೆ.ಇ. ಬೋರ್ಡ್ ಸಂಸ್ಥೆಯ ಕರ್ನಾಟಕ ಹೈಸ್ಕೂಲದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ರಾಷ್ಠೀಯ ಜಂತುಹುಳು ನಿವಾರಣೆ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು.

ಬರಿಗಾಲಿನ ನಡಿಗೆ, ಮಣ್ಣಿನಲ್ಲಿ ಆಟ, ಅಸುರಕ್ಷಿತವಾಗಿ ಆಹಾರ ಸೇವನೆ, ನೀರು ಕುಡಿಯುವುದು, ಅನೈರ್ಮಲ್ಯತೆ ಇತ್ಯಾದಿಗಳಿಂದ ಮಕ್ಖಳಲ್ಲಿ ಜಂತುಹುಳು ಉತ್ಪಾದನೆ ಆಗುತ್ತದೆ. ಇದರಿಂದಾಗಿ ಮಕ್ಕಳು ಸೇವಿಸಿದ ಆಹಾರ ಸರಿಯಾಗಿ ಪಚನವಾಗದೆ ಬೆಳವಣಿಗೆ ಕುಂಠಿತವಾಗುತ್ತದೆ. ಮಕ್ಕಳಲ್ಲಿ ಅಶಕ್ತತೆ, ಕುಬ್ಜತೆ, ಬಡಕಲು ದೇಹ ಹೊಂದುವುದು ಉಂಟಾಗುತ್ತದೆ. ಜಂತುಹುಳು ನಿವಾರಕ ಮಾತ್ರೆ ತಿನ್ನಿಸುವದರಿಂದ ಈ ಸಮಸ್ಯ ಪರಿಹರಿಸಿ, ಸಮಪ್ರಮಾಣದಲ್ಲಿ ಮಕ್ಕಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಹೊಂದಬಹುದು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಬಿ.ಸಿ.ಸತೀಶ ಮಾತನಾಡಿ, ಜಂತುಹುಳು ನಿವಾರಣೆ ಮಾತ್ರೆಯನ್ನು ವರ್ಷದಲ್ಲಿ ಎರಡು ಬಾರಿ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆ ಕಾರ್ಯಕ್ರಮದ ಮೂಲಕ ಉಚಿತವಾಗಿ ನೀಡಲಾಗುತ್ತದೆ. ಪಾಲಕರು ಹಾಗೂ ಶಿಕ್ಷಕರು ಈ ಮಾತ್ರೆಗಳನ್ನು ಪ್ರತಿ ಮಗು ತಪ್ಪದೇ ಪಡೆಯುವಂತೆ ಜಾಗೃತಿ ವಹಿಸಬೇಕು. ಮತ್ತು ಶಾಲಾ ಮಕ್ಕಳು ತಮ್ಮ ಮನೆಯಲ್ಲಿರುವ ಹಾಗೂ ನೆರೆಹೊರೆಯ ಮನೆಗಳಲ್ಲಿರುವ ಮಕ್ಕಳು, ಹದಿಹರೆಯದವರು ಈ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಬೇಕೆಂದು ತಿಳಿಸಿದರು.

ಕೆ.ಇ.ಬೋರ್ಡ ಸಂಸ್ಥೆಯ ಕಾರ್ಯಾಧ್ಯಕ್ಷ ಅರುಣ ನಾಡಗೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಯಶವಂತ ಮದೀನಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್‍ಕುಮಾರ್ ಹಂಚಾಟೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಸ್.ಎಮ್ ಹೊನಕೇರಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಲಾ ನಿಂಬಣ್ಣವರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಶಶಿ ಪಾಟೀಲ್, ಜಿಲ್ಲಾ ಶಮೀಕ್ಷಣಾ ಅಧಿಕಾರಿ ಡಾ. ಸುಜಾತಾ ಹಸವಿಮಠ, ಡಾ.ಶೋಭಾ ಮೂಲಿಮನಿ, ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಕವನ್ ದೇಶಪಾಂಡೆ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಪ್ರೌಢಶಾಲೆಯ ಪ್ರಾಂಶುಪಾಲ ಎ.ಆರ್.ಹದಲಿ ಸ್ವಾಗತಿಸಿದರು. ಶಾಲಾ ಸುಧಾರಣ ಸಮಿತಿ ಅಧ್ಯಕ್ಷ ಶ್ರೀಕಾಂತ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಸಿ. ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರೌಢ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಜಿ.ಪಂ ಸಿಇಓ ಡಾ.ಬಿ.ಸಿ.ಸತೀಶ ಅವರನ್ನು ಕೆ.ಇ.ಬೋರ್ಡ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

Read These Next

‘‘ಸತ್ತವರೆಲ್ಲ ಒಂದೇ ಸಮುದಾಯದವರು’’, ಆದುದರಿಂದ ಒಂದು ಸಮುದಾಯದವರೆಲ್ಲ ಸಾಯಬೇಕೆ!?

ಬೆಂಗಳೂರು: ಇಂದು (ಶನಿವಾರ) ನಮ್ಮ ನಾಡಿನ ದಿನಪತ್ರಿಕೆಯೊಂದು ತನ್ನ ಮುಖಪುಟದಲ್ಲಿ ಪ್ರಕಟಿಸಿದ ‘ಕೊರೋನ ಸೋಂಕಿನಿಂದ ಸತ್ತವರೆಲ್ಲ ಒಂದೇ ...

ಕೋವಿಡ್-19 ಮಾಹಿತಿಗಾಗಿ ವೆಬ್‍ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಾಣು 19  (ಕೋವಿಡ್-19)  ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ...

ಕಾರವಾರ: ಕೊರೊನಾ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ ಮಾಡಲು ಜಿಲ್ಲಾಡಳಿತ ನಿರ್ಧಾರ

ಕೊರೊನಾ ವೈರಸ್ ಹರಡುವಿಕೆ ತಡೆ ನಿಟ್ಟಿನಲ್ಲಿ  ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ  ಮಾಡಲು ಜಿಲ್ಲಾಡಳಿತ ...

ಭಟ್ಕಳದಲ್ಲಿ ಮತ್ತೊಂದು ಕೋವಿಡ್-19ಪ್ರಕರಣ ಪತ್ತೆಯೊಂದಿಗೆ  ರಾಜ್ಯದಲ್ಲಿ100 ರ ಗಡಿ ತಲುಪಿದ ಕೊರೋನ ಪೀಡಿತರು

ಭಟ್ಕಳ: ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಕೊರೋನ ಮಹಾಮಾರಿ ಮಂಗಳವಾರ (ಬೆಳಿಗ್ಗೆ ೮ಗಂಟೆಗೆ ಇದ್ದಂತೆ) ಮತ್ತೆ ತನ್ನ ...

ಭಟ್ಕಳದ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು 24x7 ಸಹಾಯವಾಣಿ ಸಿದ್ಧ; ಮನೆಬಾಗಿಲಿಗೆ ವೈದ್ಯರ ಸೇವೆ

ಭಟ್ಕಳ: ಕೊರೋನ ಮಹಾಮಾರಿ ಹಿನ್ನೆಲೆಯಲ್ಲಿ ತಾಲೂಕಿನಾದ್ಯನ ಜನರ ಸಮಸ್ಯೆಗಳಿಗೆ ಸ್ಪಂಧಿಸಲು ದಿನ ೨೪ಗಂಟೆಯೂ ಸಹಾಯವಾಣಿ ಸಿದ್ದವಿದ್ದು ...

ಸಾಮಾಜಿಕ ಜಾಲಾತಾಣದಲ್ಲಿ ಕೊರೋನ ಜಿಹಾದ್; ಗಮನಕ್ಕೆ ತಂದಲ್ಲಿ ಕ್ರಮ-ಜಿಲ್ಲಾ ಎಸ್.ಪಿ ಶಿವಪ್ರಕಾಶ

ಭಟ್ಕಳ:ಸಾಮಾಜಿಕ ಜಾಲಾತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಕುರಿತಂತೆ ತಮ್ಮ ಗಮನಕ್ಕೆ ತಂದರೆ ಅವರ ಮೇಲೆ ನಿರ್ಧಾಕ್ಷಿಣ್ಯವಾಗಿ ...

ಗಲ್ಫ್ ರಾಷ್ಟ್ರಗಳಿಂದ ಬಂದವರ ಅಜಾಗರೂಕತೆಯಿಂದಾಗಿ ಉ.ಕ.ಜಿಲ್ಲೆಯ ಜನ ಬೆಲೆ ತೆರುವಂತಾಗಿದೆ

ಭಟ್ಕಳ:ಉ.ಕ.ಜಿಲ್ಲೆಯ ಜನರು ಇಂದು ಆತಂಕದಲ್ಲಿದ್ದಾರೆ. ಒಬ್ಬರು ಇನ್ನೊಬ್ಬರೊಂದಿಗೆ ಮಾತನಾಡಲು ಹೆದರುತ್ತಿದ್ದಾರೆ. ತನ್ನದೆ ಸಮುದಾಯದ, ...

‘‘ಸತ್ತವರೆಲ್ಲ ಒಂದೇ ಸಮುದಾಯದವರು’’, ಆದುದರಿಂದ ಒಂದು ಸಮುದಾಯದವರೆಲ್ಲ ಸಾಯಬೇಕೆ!?

ಬೆಂಗಳೂರು: ಇಂದು (ಶನಿವಾರ) ನಮ್ಮ ನಾಡಿನ ದಿನಪತ್ರಿಕೆಯೊಂದು ತನ್ನ ಮುಖಪುಟದಲ್ಲಿ ಪ್ರಕಟಿಸಿದ ‘ಕೊರೋನ ಸೋಂಕಿನಿಂದ ಸತ್ತವರೆಲ್ಲ ಒಂದೇ ...

ಕೊರೋನಾ ಚಿಕಿತ್ಸೆಗಾಗಿ ತನ್ನ ಐದು ಆಸ್ಪತ್ರೆಗಳಲ್ಲಿ 1,000 ಹಾಸಿಗೆಗಳನ್ನು ಮೀಸಲಿಟ್ಟ ಜಮಾಅತೆ ಇಸ್ಲಾಮೀ ಹಿಂದ್ ;10 ಸಾವಿರ ಸ್ವಯಂ ಸೇವಕರು ಸಕ್ರಿಯ

ಕೇರಳ:  ಕೇರಳದಲ್ಲಿ ಕೊರೋನಾವನ್ನು ಎದುರಿಸಲು ಮುಖ್ಯಮಂತ್ರಿ ಪಿಣರಾಯಿ ಸರಕಾರ ಪ್ರಶಂಸಾರ್ಹ ಕ್ರಮಗಳನ್ನು ಕೈಗೊಳ್ಳುತ್ತಿರುವುದರ ...