ಮಕ್ಕಳು ಇತಿಹಾಸ ಅರಿತು ಮುನ್ನಡೆಯಬೇಕು : ಪುಷ್ಪಲತಾ ಸಿ.ಎಂ

Source: SO News | By Laxmi Tanaya | Published on 23rd June 2022, 8:31 PM | State News | Don't Miss |

ಧಾರವಾಡ  : ಮೊಬೈಲ್ ನಿಂದ ಮಕ್ಕಳ ಜೀವನ ಹಾಳಾಗಬಾರದು. ಸಾಮ್ರಾಟ ಅಶೋಕ ಕ್ರಿಸ್ತ ಪೂರ್ವ ಕಾಲದಲ್ಲಿಯೇ ಪರಿಸರ ಸಂರಕ್ಷಣೆ ಕಾರ್ಯ ಕೈಗೊಂಡಿದ್ದರು. ಮಕ್ಕಳು ಇತಿಹಾಸ ಅರಿತು ಮುನ್ನಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ  ಸಹಯೋಗದಲ್ಲಿ  ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರೇರಣಾ ಸಭಾಭವನದಲ್ಲಿ ಏರ್ಪಡಿದ್ದ ವಿಶ್ವ ಪರಿಸರ ದಿನಾಚರಣೆ 2022 ರ ಅಂಗವಾಗಿ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು  ಜ್ಞಾನವನ್ನು ಹೊಂದಬೇಕು. ಶಿಕ್ಷಕರು ಸಮಾಜವನ್ನು ಕಾಪಾಡುವುದರ ಜೊತೆಗೆ ಮಕ್ಕಳಿಗೆ ಸರಿಯಾದ ಮಾಹಿತಿ, ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡಬೇಕು. ಇರುವುದೊಂದೆ ಭೂಮಿ ಅದನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಪರಿಸರ ಅಧಿಕಾರಿ ಶೋಭಾ ಪೋಳ ಮಾತನಾಡಿ, ಸಣ್ಣ ಸಸಿಯು ಮುಂದೆ ದೊಡ್ಡ ಮರವಾಗಿ ನೆರಳನ್ನು ಕೊಡುತ್ತದೆ. ನಮ್ಮ ಪರಿಸರದಲ್ಲಿ ಲಕ್ಷಾಂತರ ಜೀವರಾಶಿಗಳಿವೆ. ಪ್ರಕೃತಿಯಿಂದ ಕಲಿಯಬೇಕಾದ ಅಂಶಗಳು ಸಾಕಾಷ್ಟು ಇವೆ. ಅದರ ಜೊತೆಗೆ ಸಾಮರಸ್ಯದಿಂದ ಬದುಕೋಣ. ಪರಿಸರದ ಸಂರಕ್ಷಣೆ ಮಾಡೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗಣಕ ಯಂತ್ರ ವಿಭಾಗದ ಮುಖ್ಯಸ್ಥೆ ವಿ.ಆರ್. ತಿವಾರಿ ಮಾತನಾಡಿ, ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸುವುದರಿಂದ ಪರಿಸರದ ಮಹತ್ವವನ್ನು ತಿಳಿದುಕೊಳ್ಳಲು ಉಪಯೋಗವಾಗುತ್ತದೆ. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ಹೊಂದಿ  ಅದನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಎಂದರು.

ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ ಉಪಸ್ಥಿತರಿದ್ದರು. 

ಶಿಕ್ಷಕಿ ವಾಣಿಶ್ರೀ ಸ್ವಾಗತಿಸಿ, ನಿರೂಪಿಸಿದರು. ಸಹಾಯಕ ವೈಜ್ಞಾನಿಕ ಅಧಿಕಾರಿ ಲಲಿತಾ ಬಿ. ದೊಡವಾಡ ವಂದಿಸಿದರು. ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ವಿವಿಧ ಶಾಲೆಯ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...