ಮಕ್ಕಳು ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು : ನ್ಯಾ. ಪಿ ಎಫ್ ದೊಡ್ಡಮನಿ

Source: SO News | By Laxmi Tanaya | Published on 12th June 2023, 10:08 PM | State News | Don't Miss |

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಾರ್ತಾ ಮತ್ತು ಪ್ರಸಾರ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098 ಇವರ ಸಂಯುಕ್ತಾಶ್ರಯದಲ್ಲಿ  ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಯಿತು.

ಜಾಗೃತಿ ಜಾಥಾ ಮತ್ತು ಸಭಾ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ  ಸದಸ್ಯ ಕಾರ್ಯದರ್ಶಿಗಳಾದ ಪಿ ಎಫ್ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಮಕ್ಕಳು ಅಭ್ಯಾಸದ ಜೊತೆಗೆ ಆಟಗಳಲ್ಲಿಯೂ ಸಹ ಪಾಲ್ಗೊಂಡು ತಮ್ಮ ಬಾಲ್ಯವನ್ನು ಕಳೆಯಬೇಕು. ತಮಗೆ ಎಲ್ಲಿಯಾದರೂ ಮಕ್ಕಳು ಕೆಲಸ ಮಾಡುತ್ತಿರುವುದು ಕಂಡು ಬಂದರೆ ಮಕ್ಕಳ ಸಹಾಯವಾಣಿ 1098 ಇವರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

     ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಸಾಲಗಟ್ಟಿ ಮತ್ತು ಕಿಡ್ಸ್ ಸಂಸ್ಥೆಯ ನಿರ್ದೇಶಕರು, ಮಕ್ಕಳು ವಿದ್ಯಾವಂತರಾಗಿ ತಮ್ಮ ಬಾಲ್ಯದ ಅಮೂಲ್ಯ ಕ್ಷಣಗಳನ್ನು ವ್ಯರ್ಥ ಮಾಡದೇ ವಿದ್ಯಾವಂತರಾಗಿರೆಂದು ತಿಳಿಸಿದರು.
       ಈ ಕಾರ್ಯಕ್ರಮದಲ್ಲಿ ಈ ಮೊದಲು ನಡೆಸಿದ ಬಾಲಕಾರ್ಮಿಕ ಶಾಲೆಯಲ್ಲಿ ಕಲಿತು ಮುಖ್ಯ ವಾಹಿನಿಗೆ ದಾಖಲಾಗಿ ಯಶಸ್ವಿಯಾದ ಇಬ್ಬರು ಬಾಲಕಾರ್ಮಿಕರನ್ನು ಸನ್ಮಾನಿಸಲಾಯಿತು. ಮತ್ತು ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚು ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ  ಹಿರಿಯ ಕಾರ್ಮಿಕ ನಿರೀಕ್ಷಕಿ
ಭುವನೇಶ್ವರಿ ಕೋಟಿಮಠ  ಒಂದನೇ ವೃತ್ತ, ಧಾರವಾಡ ಹಾಗೂ  ಅಕ್ರಮ್ ಅಲ್ಲಾಪುರ್  ಹಿರಿಯ ಕಾರ್ಮಿಕ ನಿರೀಕ್ಷಕರು, ಎರಡನೇ ವೃತ್ತ ಹುಬ್ಬಳ್ಳಿ  ಇವರನ್ನು ಸನ್ಮಾನಿಸಲಾಯಿತು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಯಿತು. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿಯನ್ನು ಪಡೆಯಲಾಯಿತು.
         ಕಾರ್ಯಕ್ರಮವನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ್ ಪಂಚಾಕ್ಷರಿ ಮಠ  ನಿರೂಪಿಸಿದರು.   ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ರವರು ಸ್ವಾಗತಿಸಿದರು. ಶ
ಹಿರಿಯ ಕಾರ್ಮಿಕ ನಿರೀಕ್ಷಕ ಅಕ್ರಮ್ ಅಲ್ಲಾಪುರ್  ವಂದಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿ ಲಲಿತಾ ಸಾತೇನಹಳ್ಳಿ ಮತ್ತು ಮಾರಿಕಾಂಬ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕ ಭುವನೇಶ್ವರಿ ಕೋಟಿಮಠ ಹಾಗೂ ಸಂಗೀತ ಬೆನಕನಕಟ್ಟಿ, ಬಾಲಕಾರ್ಮಿಕ ಯೋಜನಾ ಸಂಘ ಧಾರವಾಡದ ಸಿಬ್ಬಂದಿಗಳಾದ  ಸಂಗೀತಾ ಲಕ್ಕುಂಡಿ, ಸಿದ್ದಲಿಂಗಪ್ಪ ವಗ್ಗರ್ , ಶಾಲಾ ಮಕ್ಕಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಿವಿಧ ಶಾಲೆಗಳ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಗೊಂಬೆ ಆಟ ಪ್ರದರ್ಶನ (ಪಪೆಟ್ ಶೋ) ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ಈ ರೀತಿಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಪ್ರಾಸ್ತಾವಿಕ ಭಾಷಣವನ್ನು ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್.  ಮಾಡಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...