ಚೌಕಿ(ಎ), ಚೌಕಿ(ಬಿ) ತಾಂಡಾ, ಕರಕನಳ್ಳಿ, ಮನ್ನಾಏಖ್ಖೇಳಿ ಗ್ರಾಮಸ್ಥರ ಅಹವಾಲು ಆಲಿಸಿದ ಸಚಿವರು

Source: so news | By MV Bhatkal | Published on 9th March 2019, 11:18 PM | State News | Don't Miss |

ಬೀದರ:ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪೂರ ಅವರು ಮಾ.6ರಂದು ಹುಮನಾಬಾದ್ ತಾಲೂಕಿನ ಚೌಕಿ(ಎ) ಮತ್ತು ಚೌಕಿ(ಬಿ) ತಾಂಡಾ, ಕರಕನಳ್ಳಿ ಹಾಗೂ ಮನ್ನಾಎಖ್ಖೇಳಿ ಗ್ರಾಮಗಳಲ್ಲಿ ಸಂಚರಿಸಿ ಜನರ ಅಹವಾಲುಗಳನ್ನು ಆಲಿಸಿದರು.
ಚಾಂಗ್ಲೇರಾದಿಂದ ನೇರವಾಗಿ ಚೌಕಿ(ಎ) ಗ್ರಾಮಕ್ಕೆ ತೆರಳಿದ ಸಚಿವರು, ಅಲ್ಲಿನ ಜನರೊಂದಿಗೆ ಮಾತನಾಡಿಸಿ ಗ್ರಾಮದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಚೌಕಿ(ಬಿ) ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಗ್ರಾಮಸ್ಥರೊಬ್ಬರು ಮಾತನಾಡಿ, ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ದೂರದ ಪ್ರದೇಶಗಳಿಂದ ನೀರು ತರಲಾಗುತ್ತಿದೆ. ಜಾನುವಾರುಗಳಿಗೂ ಸಹ ಕುಡಿಯಲು ನೀರು ಸಿಗುತಿಲ್ಲ ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಸಚಿವರು, ತಜ್ಞರಿಂದ ನೀರಿನ ಮೂಲಗಳನ್ನು ಗುರುತಿಸಿ ಕೊಳವೆ ಬಾವಿ ಹಾಕಿಸಬೇಕು. ಗ್ರಾಮದಲ್ಲಿ ಒಂದು ಟ್ಯಾಂಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಲ್ಲಿದ್ದ ಪಿಡಿಓ ಹಾಗೂ ಇತರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉದ್ಯೋಗ ಸಿಗದೇ ಇರುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಗ್ರಾಮದ ಮಹಿಳೆಯರು ತಿಳಿಸಿದಾಗ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಮಹಾಂತೇಶ ಬೀಳಗಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಉದ್ಯೋಗ ಖಾತರಿ ಯೋಜನೆಯಡಿ 150 ದಿನಗಳ ಉದ್ಯೋಗ ನೀಡಲಾಗುತ್ತದೆ. ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬರಿಗೂ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಆದರೆ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳು ಗಲೀಜಾಗುತ್ತಿವೆ. ಬೇಗನೆ ಗ್ರಾಮದಲ್ಲಿ ಚರಂಡಿಗಳನ್ನು ನಿರ್ಮಿಸಿಕೊಡಬೇಕು. ಅಕ್ಕಮ್‍ಪೇಟ್ ಡ್ಯಾಮ್ ಸರಿಪಡಿಸಿದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು.
ಬಳಿಕ ಸಚಿವರು ಕರಕನಳ್ಳಿಗೆ ಗ್ರಾಮಕ್ಕೆ ತೆರಳಿ, ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ನರೇಗಾ ಯೋಜನೆಯ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಯಾವ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು 24 ಗಂಟೆಯೂ ಕೆಲಸ ನಿರ್ವಹಿಸಬೇಕು. ಎಲ್ಲಿಯಾದರೂ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಇದಕ್ಕೂ ಮುನ್ನ ಸಚಿವರು ಬಕ್ಕಪ್ರಭು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮನ್ನಾಎಖ್ಖೇಳಿ ಗ್ರಾಮದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಮಾತನಾಡಿ, ಮನ್ನಾಏಖ್ಖೇಳಿಯಲ್ಲಿ ಜನಸಂಖ್ಯೆ ಹೆಚ್ಚಿದ್ದು, ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಹೊಸ ಬೋರ್‍ವೆಲ್ ಹಾಕಿಸಿದರೂ ನೀರು ಸಿಗುತ್ತಿಲ್ಲ ಎಂದು ಸಚಿವರಿಗೆ ಮಾಹಿತಿ ನೀಡಿದರು. ಈ ವೇಳೆ ಸಚಿವರು ಮಾತನಾಡಿ, ಅಗತ್ಯವಿರುವ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸಿ, ಸಮಸ್ಯೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಟ್ಯಾಂಕರ್‍ಗಳನ್ನು ಕಳುಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. 
ಈ ಸಂದರ್ಭದಲ್ಲಿ ಮುಖಂಡರಾದ ಸಂತೋಷ ರಾಸೂರ್, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಚೇಂದ್ರ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...