ಕೋಲ್ಕತಾ: ಪ.ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ಸಿಎಎ ಮಾತ್ರ ಜಾರಿ, ಎನ್‌ಆರ್‌ಸಿ ಇಲ್ಲ: ಬಿಜೆಪಿ

Source: VB | By S O News | Published on 5th April 2021, 7:31 PM | National News |

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸಿಎಎ ಅನ್ನು ಮಾತ್ರ ಜಾರಿಗೊಳಿಸಲಾಗುವುದು ಮತ್ತು ಎನ್‌ಆರ್‌ಸಿ ಪ್ರಕ್ರಿಯೆಯನ್ನು ನಡೆಸುವುದಿಲ್ಲ ಎಂದು ಬಿಜೆಪಿ ಹೇಳಿದೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು, "ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ನಾವು ರಾಜ್ಯದಲ್ಲಿ ಸಿಎಎ ಅನ್ನು ಮಾತ್ರ ಜಾರಿಗೊಳಿಸುತ್ತೇವೆ. ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಮಂಜೂರು ಮಾಡಲು ನಾವು ಶ್ರಮಿಸುತ್ತಿರುವುದರಿಂದ ಅದು ನಮಗೆ ಮಹತ್ವದ ವಿಷಯವಾಗಿದೆ. ನಾವು  ಚುನಾವಣೆಯಲ್ಲಿ ಗೆದ್ದರೂ ಎನ್‌ಆರ್‌ಸಿ ಪ್ರಕ್ರಿಯೆಯನ್ನು ನಡೆಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ" ಎಂದು ತಿಳಿಸಿದರು.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಬಿಜೆಪಿಯ ವಿರುದ್ಧ ಅಪಪ್ರಚಾರ ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದ ವಿಜಯವರ್ಗೀಯ ಅವರು, ಸಿಎಎ ಹಲವಾರು ಜನರಿಗೆ ಲಾಭದಾಯಕವಾಗಲಿದೆ, ಹೀಗಿರುವಾಗ ಟಿಎಂಸಿ ಅದನ್ನೇಕೆ ವಿರೋಧಿಸುತ್ತಿದೆ ಎನ್ನುವುದು ಅಚ್ಚರಿದಾಯಕವಾಗಿದೆ ಎಂದರು. ಹಾಲಿ ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾನು 294 ಸ್ಥಾನಗಳ ಪೈಕಿ 200ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದೇನೆ ಎಂಬ ಬಿಜೆಪಿಯ ಹೇಳಿಕೆಯನ್ನು ಅವರು ಪುನರುಚ್ಚರಿಸಿದರು.

ರಾಜ್ಯದಲ್ಲಿ ಪಕ್ಷವು ಸರಕಾರವನ್ನು ರಚಿಸಿದರೆ ಮೊದಲ ಸಂಪುಟ ಸಭೆಯಲ್ಲಿಯೇ ಸಿಎಎ ಅನ್ನು ಜಾರಿಗೊಳಿಸುವುದಾಗಿ ಬಿಜೆಪಿ ಪ.ಬಂಗಾಳ ಕ್ಕಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆಯನ್ನು ನೀಡಿದೆ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಿಎಎ ವಿರುದ್ಧ ತನ್ನ ಪಕ್ಷದ ನಿಲುವನ್ನು ಪದೇಪದೇ ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷದ ಜನವರಿಯಲ್ಲಿ ರಾಜ್ಯ ವಿಧಾನಸಭೆಯು ಸಿಎಎ ವಿರುದ್ಧ ನಿರ್ಣಯವನ್ನೂ ಅಂಗೀಕರಿಸಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...