ಭಟ್ಕಳದಲ್ಲಿ ಪೌರ ಕಾರ್ಮಿಕ ದಿನಾಚರಣೆ. ಜಾಲಿ ಕಡಲತೀರದಲ್ಲಿ ಆಟವಾಡಿದ ಪೌರಕಾರ್ಮಿಕರು.

Source: SO News | By Laxmi Tanaya | Published on 23rd September 2020, 3:07 PM | Coastal News | Don't Miss |

ಭಟ್ಕಳ : ತಾಲೂಕಿನ ಜಾಲಿ ಕಡಲತೀರದಲ್ಲಿ ಇಂದು ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

 ಭಟ್ಕಳ ಪುರಸಭೆ ಮತ್ತು ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕರಿಗಾಗಿ ವಿವಿಧ ಸ್ಪರ್ದೆಗಳನ್ನು ಏರ್ಪಡಿಸಲಾಗಿತ್ತು. ಹಗ್ಗಜಗ್ಗಾಟ, ಕಬಡ್ಡಿ, ವಾಲಿಬಾಲ್ ಸೇರಿದಂತೆ ವಿವಿಧ ಸ್ಪರ್ದೆಗಳಲ್ಲಿ ಪುರುಷ ಹಾಗೂ ಮಹಿಳಾ ಕಾರ್ಮಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಇಂದು ಸ್ವಚ್ಚತೆ ಕಾರ್ಯ ಮಾಡಲಿಲ್ಲ. ಎಲ್ಲಾ ಕಾರ್ಮಿಕರು ವಿವಿಧ ಸ್ಪರ್ದೆಯಲ್ಲಿ ಪಾಲ್ಗೊಂಡಿದ್ದರು. ಭಟ್ಕಳ ಪುರಸಭೆ ಮತ್ತು ಜಾಲಿ ಪಟ್ಟಣ ಪಂಚಾಯತ್ ಅಧಿಕಾರಿಗಳು  ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಸಂಜೆ ಇಲ್ಲಿನ ನಾಮಧಾರಿ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.  ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಭರತ್  ಬಹುಮಾನ ವಿತರಣೆ ಮಾಡಲಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...