ಪೌರ ಕಾರ್ಮಿಕರು ಸೈನಿಕರಿದ್ದಂತೆ: ಪುರಸಭೆ ಮುಖ್ಯಾಧಿಕಾರಿ ದೇವರಾಜು.

Source: SO News | By Laxmi Tanaya | Published on 23rd September 2020, 9:48 PM | Coastal News | Don't Miss |

ಭಟ್ಕಳ : ಪುರಸಭೆ ಭಟ್ಕಳ ಮತ್ತು ಜಾಲಿ ಪಟ್ಟಣ ಪಂಚಾಯತ್ ಅಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನ ನಾಮಧಾರಿ ಸಭಾಭವನದಲ್ಲಿ ನಡೆಯಿತು.

ಪುರಸಭೆ ಮುಖ್ಯಾಧಿಕಾರಿ ಡಿ ದೇವರಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪೌರ ಕಾರ್ಮಿಕರು ನಗರ ಸ್ವಚ್ಚತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಕೊರೋನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ಹಗಲು ರಾತ್ರಿ ಶ್ರಮಿಸಿದ್ದಕ್ಜೆ ಅಭಿನಂದನೆ ಸಲ್ಲಿಸಿದರು. ಪೌರ ಕಾರ್ಮಿಕರು ಕೂಡ ತಮ್ಮ ಆರೋಗ್ಯದ  ಬಗ್ಗೆ ಹೆಚ್ಚನ ಕಾಳಜಿ ವಹಿಸಿಕೊಳ್ಳಬೇಕು. ಸೈನಿಕರು ಹೇಗೆ ದೇಶ ಕಾಯುತ್ತಾರೋ ಹಾಗೆಯೇ ನಗರ ಸ್ವಚ್ಚತೆ ಕಾಪಾಡಿ ಜನರ ಆರೋಗ್ಯ ಕಾಪಾಡುತ್ತಿದ್ದಿರಿ‌. ನೀವು ಕೂಡ ಸೈನಿಕರಂತೆ ಎಂದು ಹೇಳಿದರು.

ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರಕರ್ ಅವರು ಅಧ್ಯಕ್ಷತೆ ವಹಿಸಿ ಮಾತ‌ನಾಡಿದರು.  ಕಾರ್ಯಕ್ರಮದಲ್ಲಿ ಹಿರಿಯ ಪೌರ ಕಾರ್ಮಿಕ ಸೋಮ  ಸುಕ್ರ ಹರಿಜನ ಅವರನ್ನ ಸನ್ಮಾನಿಸಲಾಯಿತು.
ಜೊತೆಗೆ ಕೊರೋನಾ ಅವಧಿಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆ ಹಿರಿಯ ಆರೋಗ್ಯ ನೀರಿಕ್ಷಕಿ ಸೊಜಿಯಾ ಸೋಮನ್, ಭಟ್ಕಳ ಪುರಸಭೆಯ ಸಮುದಾಯ ಸಂಘಟನಾಧಿಕಾರಿಯಾದ ವೇಣುಗೋಪಾಲ ಶಾಸ್ತ್ರಿ, ಅಧಿಕಾರಿಗಳಾದ ನಾರಾಯಣ ನಾಯ್ಕ, ವಿನಾಯಕ ನಾಯ್ಕ,ಅನ್ವರ್ ಬಾಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವೇಣುಗೋಪಾಲ ಶಾಸ್ತ್ರಿ ಸ್ವಾಗತಿಸಿದರು. ನಾರಾಯಣ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read These Next

ದೇರಳಕಟ್ಟೆ ಬಳಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ. ಘಟನೆ ನಡೆದು ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು.

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ...

ಸುಳ್ಳಿನ ಆಧಾರದಲ್ಲಿ ಅಸ್ತಿತ್ವಕ್ಕೆ ಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ-ಎಚ್.ಕೆ.ಪಾಟೀಲ್

ಭಟ್ಕಳ : ದುಷ್ಟಾಲೋಚನೆಯೊಂದಿಗೆ ಅಧಿಕಾರಿಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ವಿಶ್ವಾಸ ಕಳೆದುಕೊಂಡಿವೆ ಎಂದು ...

ಮನೆಯ ಚಾವಣಿ ಕುಸಿದು ಬಾಲಕ ಮೃತ

ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ...

ಕಾರವಾರ: ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಕುಬೇರಪ್ಪನವರಿಗೆ ಮತ ನೀಡಿ. ಎಚ್ ಕೆ ಪಾಟೀಲ್ ಮತಯಾಚನೆ.

‌ಅಕ್ಟೋಬರ್ 28ರಂದು ನಡೆಯುವ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕಾಂಗ್ರೆಸ್ ಮುಖಂಡ, ...

ಬಿಕಾಂ ಫೈನಲ್ ಪರೀಕ್ಷೆಯಲ್ಲಿ ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜು ಸಾಧನೆ.

ಭಟ್ಕಳ : ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನ ಬಿ.ಕಾಂ ಅಂತಿಮ ವಿದ್ಯಾರ್ಥಿಗಳು ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ...