ಅಲ್ ಹಿಲಾಲ್ ಸಂಸ್ಥೆಯಿಂದ ಮಗ್ದೂಮ್ ಕಾಲೋನಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Source: sonews | By Staff Correspondent | Published on 8th December 2017, 6:51 PM | Coastal News | Don't Miss |

ಭಟ್ಕಳ: ಪುರಸಭೆ ವ್ಯಾಪ್ತಿಯ ಮಗ್ದೂಮ್ ಕಾಲೋನಿಯಲ್ಲಿ ಅಲ್ ಹಿಲಾಲ್ ಅಸೋಸಿಯೇಶನ್ ನಿಂದ  ಶುಕ್ರವಾರದಂದು ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಸ್ವಚ್ಚ ಮಗ್ದೂಮ್ ಯೋಜನೆಯಡಿ ಅಲ್ ಹಿಲಾಲ್ ಅಸೋಸಿಯೇಶನ್ ಸದಸ್ಯರು ಹಾಗೂ ಮೊಹಲ್ಲಾದ ಯುವಕರು ಪ್ರತಿ ಶುಕ್ರವಾರ ಮಗ್ದೂಮ್ ಕಾಲೋನಿಯನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಗೈಗೆತ್ತಿಕೊಳ್ಳಲಾಗಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಶಬ್ಬಿರ್ ಗಂಗೋಳಿ ತಿಳಿಸಿದ್ದಾರೆ.
ಮೊಹಲ್ಲಾದ ಪ್ರತಿಯೊಂದು ಮನೆಯ ಎದರು ಇರುವ ಗಿಡಕಂಟಿಗಳನ್ನು ಸ್ವಚ್ಚಗೊಳಿಸಿವುದು, ಜನರಲ್ಲಿ ಸ್ವಚ್ಚತೆ ಕುರಿತಂತೆ ಜಾಗೃತಿ ಮೂಡಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಮಾಧ್ಯಮಗಳಿಗೆ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಂ ಕೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...