"ಸ್ವಚ್ಛ ಗ್ರಾಮ - ಸ್ವಚ್ಛ ಪರಿಸರ" ಪಾಕ್ಷಿಕಾಚರಣೆ ಕಾರ್ಯಕ್ರಮಕ್ಕೆ ಚಾಲನೆ

Source: sonews | By Staff Correspondent | Published on 5th June 2020, 4:17 PM | Coastal News |

ಕಾರವಾರ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ "ಸ್ವಚ್ಛ ಗ್ರಾಮ - ಸ್ವಚ್ಛ ಪರಿಸರ" ಪ್ರಾಕ್ಷಿಕಾಚರಣೆ ಕಾರ್ಯಕ್ರಮಕ್ಕೆ ಉತ್ತರಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಅದ್ದೂರಿಯಾಗಿ ಇಂದು ಚಾಲನೆ ನೀಡಲಾಯಿತು. 
     
ಉತ್ತರಕನ್ನಡ ಜಿಲ್ಲಾ ಪಂಚಾಯತ ಹಾಗೂ ಸ್ವಚ್ಛ ಭಾರತ ಮಿಷನ್ ಸಹಯೋಗದಲ್ಲಿ ಕಾರವಾರದ ಜಿಲ್ಲಾ ಪಂಚಾಯತ ಆವರಣದಲ್ಲಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. 

ವಿವಿಧ ಜಾತಿಯ ಸಸಿಗಳನ್ನು ಜಿಲ್ಲಾ ಪಂಚಾಯತ ಕಚೇರಿಯ ಮುಂಭಾಗದಲ್ಲಿ ನೆಡಲಾಯಿತು.   ಆರಂಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ(ಆಡಳಿತ)ನಾಗೇಶ ರಾಯ್ಕರ್,  ಮುಖ್ಯ ಲೆಕ್ಕಾಧಿಕಾರಿ ಸಂಗೀತಾ ಭಟ್, ಜಿಲ್ಲಾ ಯೋಜನಾಧಿಕಾರಿ ವಿ ಎಂ ಹೆಗಡೆ, ಸಾಮಾಜಿಕ ಅರಣ್ಯ ಡಿ ಎಪ್ ಓ  ಉದಯ ನಾಯ್ಕ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ  ಪರಿಸರ ರಕ್ಷಣೆ ಕುರಿತು ಪ್ರತಿಜ್ಞೆ ವಿಧಿಯನ್ನು ಭೋದಿಸಲಾಯಿತು. 

ಬಳಿಕ ಮಾತನಾಡಿದ ನಾಗೇಶ್ ರಾಯ್ಕರ್ ಜೂನ್ 5 ರಿಂದ 19 ರವರೆಗೆ ಸ್ವಚ್ಛ ಗ್ರಾಮ - ಸ್ವಚ್ಛ ಪರಿಸರದ ಆಚರಣೆ ಪ್ರಯುಕ್ತ ಪಾಕ್ಷಿಕಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ದ್ರವ ತ್ಯಾಜ್ಯ ವಿಲೇವಾರಿಯನ್ನು ಮನೆ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಕಿರು ಚಿತ್ರ, ಯಶೋಗಾಥೆ, ಉತ್ತಮ ಬರಹಗಳನ್ನು ಆಹ್ವಾನಿಸಲು  ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಶಾಲಾ, ಕಾಲೇಜು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜಿಲ್ಲಾ ಪಂಚಾಯತ ಕಚೇರಿಗೆ ಇ ಮೇಲ್ ಮೂಲಕ ಸಲ್ಲಿಸುವಂತೆ ಕರೆ ನೀಡಿದರು.

ಇನ್ನು ಕಾರ್ಯಕ್ರಮದಲ್ಲಿ  ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಸ್ವಚ್ಛ ಭಾರತ ಮಿಷನ್ ಮಾನವ ಸಂಪನ್ಮೂಲ ಸಮಾಲೋಚಕ ಸೂರ್ಯನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್ ಬಿ ಎಂ ಮಾಹಿತಿ ಶಿಕ್ಷಣ ಸಂವಹನ ಸಮಾಲೋಚಕ ಕಡತೋಕಾ ಮಂಜು, ಘನ ಮತ್ತು ದ್ರವ ತ್ಯಾಜ್ಯ ಸಮಾಲೋಚಕ ಅಶ್ವಿನ್ ನಾಯ್ಕ, ಶುಚಿತ್ವ ಮತ್ತು ನೈರ್ಮಲ್ಯ ಸಮಾಲೋಚಕ ಈರಣ್ಣ ನಬಾಪುರೆ ಕಾರ್ಯಕ್ರಮ ಸಂಯೋಜಿಸಿದರು.

 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...