ಸ್ವಚ್ಚತಾ ಮನೋಭಾವ ಮನೆಯಿಂದಲೇ ಆರಂಭವಾಗಬೇಕು: ಎಸಿ ಅಭಿಮತ

Source: sonews | By Staff Correspondent | Published on 21st September 2019, 6:06 PM | Coastal News | Don't Miss |

ಕಾರವಾರ: ಸ್ವಚ್ಚತಾ ಮನೋಭಾವ ಮನೆಯಿಂದಲೇ ಆರಂಭವಾಗಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ ಬಿ.ಅಭಿಜಿನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಕರಾವಳಿ ಭದ್ರತಾ ಪಡೆ ಕಾರವಾರದ ಡಾ.ರವೀಂದ್ರನಾಥ್ ಟ್ಯಾಗೋರ್ ಕಡಲತೀರದಲ್ಲಿ ಶನಿವಾರ ಮುಂಜಾನೆ ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಚತಾ ಮನೋಭಾವ ಮನೆಯಿಂದಲೇ ಆರಂಭವಾಗಬೇಕು ಈ ಮೂಲಕ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ದೇಶದಲ್ಲಿ ಪ್ರತಿದಿನ ಸರಿಸುಮಾರು 1.5 ಲಕ್ಷ ಮೆಟ್ರಿಕ್ ಟನ್ ಹಾಗೂ ರಾಜ್ಯದಲ್ಲಿ ಸುಮಾರ 5000 ಮೆಟ್ರಿಕ್ ಟನ್ ಕಸ ಪ್ರತಿ ದಿನ ಉತ್ಪನ್ನವಾಗುತ್ತಿದೆ. ಈ ಕಸ ಎಲ್ಲೆ ಉತ್ಪತ್ತಿಯಾಗಿದ್ದರೂ ಸರಿಯಾಗಿ  ವಿಲೇವಾರಿಯಾಗದಿದ್ದರೆ ನೇರವಾಗಿ ಸಮುದ್ರ ಸೇರುತ್ತದೆ. ಮಾನವ ನಿರ್ಮಿಸಿದ ಈ ಅವಾಂತರದಿಂದ ಸಮುದ್ರದ ಜಲಚರಗಳು ಸಮಸ್ಯೆ ಅನುಭವಿಸಬೇಕಾಗುತ್ತದೆ. ಅಂತಿಮವಾಗಿ ಅದು ಮನುಷ್ಯನಿಗೂ ಮಾರಕವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಚಾಕಲೇಟ್ ಕವರಿನಂತಹ ಸಣ್ಣ ಕಸವನ್ನೂ ಸರಿಯಾಗಿ ವಿಲೇವಾರಿ ಮಾಡುವ ಹಾಗೂ ಉತ್ಪತ್ತಿಯಾಗುವ ಕಸವನ್ನು ವಿಂಗಡಿಸಿ ಸೂಕ್ತರೀತಿಯಲ್ಲಿ ಸಂಸ್ಕರಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸ್ವಚ್ಚತೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಸ್ವಚ್ಚತಾ ಅಭಿಯಾನ ನಂತರ ಪ್ರತಿಕ್ರಿಯಿಸಿದ ಭಾರತೀಯ ಕರಾವಳಿ ಪಡೆಯ ಕಮಾಂಡೆಂಟ್ ಅಧಿಕಾರಿ ಸಿ.ಎಸ್.ಜೋಷಿ, ಭಾರತೀಯ ಕರಾವಳಿ ಪಡೆಯಿಂದ ದೇಶಾದ್ಯಂತ ಇಂದು ಕರಾವಳಿ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಅಂಗವಾಗಿ ಕಾರವಾರದ ಕಡಲತೀರದಲ್ಲಿ ಇಂದು ನಡೆಯುತ್ತಿರುವ ಕಾರ್ಯಕ್ರಮದಲ್ಲಿ 2450 ಸ್ವಯಂ ಸೇವಕರು ಸ್ವಚ್ಚತಾ ಕಾರ್ಯದಲ್ಲಿ ತೊಡಗಿ ಸುಮಾರು 4000ಕೆಜಿ ಕಸವನ್ನು ಸಂಗ್ರಹಿಸಿದ್ದಾರೆ. ಕಡಲತೀರದ ಕಸದಿಂದ ಜಲಚರಗಳ ಮೇಲೆ ಪರಿಣಾಮ ಬೀರುವುದರಿಂದ ಕಡಲತೀರದಲ್ಲಿ ಸ್ವಚ್ಚತೆ ಕಾಪಾಡಬೇಕೆಂದು ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ಹಿನ್ನೆಲೆ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹಾಗೂ ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸ್ವಚ್ಚತಾ ಅಭಿಯಾನದಲ್ಲಿ ಮೀನುಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಕರಾವಳಿ ಪೊಲೀಸ್ ಪಡೆ, ನಗರಸಭೆ ಅಧಿಕಾರಿಗಳು, ಕಾರವಾರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...