ಶತಮಾನೋತ್ಸವದ ಸಂಭ್ರಮದಲ್ಲಿ ಭಟ್ಕಳದ ಅಂಜುಮನ್ ಸಂಸ್ಥೆ

Source: sonews | By Staff Correspondent | Published on 30th December 2018, 12:23 AM | Coastal News | State News | Don't Miss |

•    ಜ.3ಕ್ಕೆ ಬೃಹತ್ ಮೆರವಣೆಗೆ ಮೂಲಕ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ

ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಅಂಜುಮನ್ ಹಾಮಿಯೇ ಮುಸ್ಲಿಮೀನ್ 2019ನೇ ವರ್ಷವನ್ನು ಶತಮಾನೋತ್ಸ ವರ್ಷವನ್ನಾಗಿ ಆಚರಿಸುತ್ತಿದ್ದು ವರ್ಷಪೂರ್ತಿ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಶತಮಾನೋತ್ಸವದ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಂ ಜುಕಾಕೋ ಹೇಳಿದರು. 

ಅವರು ಶನಿವಾರ ಸಂಜೆ ಅಂಜುಮನಾಬಾದ್ ನಲ್ಲಿರು ಸಂಸ್ಥೆಯ ನೂತನ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು. 

ಜ.3ರಂದು ಅಂಜುಮನ್ ಸಂಸ್ಥೆಯ ಮೈದಾನದಲ್ಲಿ (ಅಂಜುಮನಾಬಾದ್) ಮಧ್ಯಾಹ್ನ 2ಗಂಟೆಗೆ ಬೃಹತ್ ಮೆರವಣೆಯ ಮೂಲಕ ಶತಮಾನೋತ್ಸವದ ಸಂಭ್ರಮಕ್ಕೆ ಚಾಲನೆ ನೀಡುತ್ತಿದ್ದು, ಜ.5 ರಂದು ಬೆಳಿಗ್ಗೆ 9ಗಂಟೆ ಯಿಂದ 12.30 ವರೆಗೆ ಉದ್ಘಾಟನಾ ಸಮಾರಂಭ ನೆರವೇರುವುದು. ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಶತಮಾನೋತ್ಸವ ವರ್ಷಾಚರಣೆ ಸಮಾರಂಭವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಸಚಿವರಾದ ಯು.ಟಿ.ಕಾದರ್, ಝಮೀರ್ ಆಹ್ಮದ್ ಖಾನ್, ಶಾಸಕ ಸುನಿಲ್ ನಾಯ್ಕ, ವಿಶ್ವೇಶ್ವರ ಹೆಗಡೆ ಕಾಗೇರಿ, ಹಾಗೂ ಮಾಜಿ ಶಾಸಕ ಮಾಂಕಾಳ್ ವೈದ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮರಂಭವು ಜಾಮಿಯಾ ಇಸ್ಲಾಮಿಯಾ ಇಶಾತುಲ್ ಉಲೂಮ್ ನ ಅಧ್ಯಕ್ಷ ಹಝರತ್ ಮೌಲಾನ ಗುಲಾಂ ಮುಹಮ್ಮದ್ ವಸ್ತಾನ್ವಿಯವರ ದಿವ್ಯ ಉಪಸ್ಥಿತಿಯಲ್ಲಿ ಜರಗುವುದು ಎಂದು ಅವರು ತಿಳಿಸಿದರು. 

ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್ ಮಾತನಾಡಿ, ಭಟ್ಕಳದ ಆಸುಪಾಸಿನ ವಿದ್ಯಾರ್ಥಿಗಳಿಗೆ ಸಮಾಜಿಕ, ಆರ್ಥಿಕ ಮತ್ತು ರಾಜಕೀಯ ಶಿಕ್ಷಣವನ್ನು ಒದಗಿಸಿ ಅವರನ್ನು ದೇಶದ ಸಮರ್ಥ ಪ್ರಜೆಗಳನ್ನಾಗಿ ಮಢುವ ಸದುದ್ದೇಶದಿಂದ ಹಿಂದಿನ ನಮ್ಮ ಸಮಾಜದ ಪ್ರಮುಖರೂ, ಶಿಕ್ಷಣ ಪ್ರೇಮಿಗಳೂ ಆಗಿರುವ ಎಂ.ಎಂ.ಸಿದ್ದೀಕ್, ಡಿ.ಎಚ್.ಸಿದ್ದೀಕ್ ಮತ್ತು ಎಫ್.ಎ.ಹಸನ್ ರವರು 1919ರಲ್ಲಿ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿದರು. ಸಂಸ್ಥೆಯ ಪ್ರಾರಂಭಿಕ ಹಂತದಲ್ಲಿ ಪ್ರಾಥಮಿಕ ತರಗತಿಯಿಂದ ಆರಂಭಿಸಿ ಇಂದಿನ ಆಧುನಿಕ ಶೈಕ್ಷಣಿಕ ಯುಗದಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಮಾಧ್ಯಮಿಕ, ಪ್ರೌಢ, ಪದವಿಪೂರ್ವ, ಪದವಿ, ಸ್ನಾತಕೋತ್ರ, ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣದವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿದೆ ಎಂದರು. ಶತಮಾನೋತ್ಸವ ಸಂಭ್ರಮಾಚರಣೆಯ ಸಂದರ್ಭದಲ್ಲಿ  ಸಂಸ್ಥೆಯಿಂದ ಶಿಕ್ಷಣವನ್ನು ಪಡೆದ ಎಲ್ಲರಿಂದ ಅಭಿಪ್ರಾಯಗಳನ್ನು ಪಡೆಯುವುದರ ಮೂಲಕ ಮುಂದಿನ ಗುರಿಯನ್ನು ತಲುಪು ಪ್ರಯತ್ನವನ್ನು ಮಾಡಲಾಗುತ್ತಿದೆ. ಉದ್ಘಾಟನಾ ಸಮಾರಂಭದಲ್ಲಿ  ನಮ್ಮ ಸಂಸ್ಥೆ ಇಷ್ಟು ಎತ್ತರದಲ್ಲಿ ಬೆಳೆಯಲು ಕಾರಣೀಕರ್ತರಾದ ಸಿಬ್ಬಂಧಿಗಳನ್ನು ಅವರು ಪ್ರಶಂಸನೀಯ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಅಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದರು. 
ಶತಮಾನೋತ್ಸವ ಸಮಿತಿ ಸಂಚಾಲಕ ಅಬ್ದುಲ್ ರಖೀಬ್ ಎಂ.ಜೆ. ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಶಾಬಂದ್ರಿ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಮಾಧ್ಯಮ ಸಮಿತಿ ಸಂಚಾಲಕ ಹಾಗೂ ಸ್ಕೂಲ್ ಬೋರ್ಡ್ ಕಾರ್ಯದರ್ಶಿ ಮೊಹಸಿನ್ ಶಾಬಂದ್ರಿ, ಆಡಳಿತ ಮಂಡಳಿಯ ಎಸ್.ಎಂ.ಸೈಯ್ಯದ್ ಅಬ್ದುಲ್ ಅಝೀಮ್ ಅಂಬಾರಿ, ಮೀರಾ ಸಿದ್ದೀಖ್, ಕೆ.ಎಂ.ಬುರ್ಹಾನ್, ತಾಹಾ ಮುಅಲ್ಲಿಮ್, ಮುಝಮ್ಮಿಲ್ ರುಕ್ನುದ್ದೀನ್, ಅಬ್ದುಸ್ಸಮಿ ಕೋಲಾ, ಹಾಶಿಮ್ ಮೊಹತೆಶಮ್,ಅಬ್ದುಲ್ ಕಾದಿರ್ ಎಸ್.ಎಂ. ಆಫ್ತಾಬ್ ಖಮರಿ, ಎಸ್.ಎಂ.ಪರ್ವಾಝ್, ಆಫಾಖ್ ಕೋಲಾ ಮತ್ತಿತರರು ಉಪಸ್ಥಿತರಿದ್ದರು. 
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...