ಕೋಲಾರ: ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ, ಸಚಿವರಿಗೆ ಮನವಿ ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಿ -ಡಾ ವೈ.ಎ. ನಾರಾಯಣಸ್ವಾಮಿ

Source: Shabbir Ahmed | By S O News | Published on 22nd June 2021, 4:12 PM | State News |

ಕೋಲಾರ: ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ .

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು  ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ, ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...