ಓಮೆನ್ ಚಾಂಡಿ ನಿಧನಕ್ಕೆ ಸಿಎಂ ಸೊದ್ದರಾಮಯ್ಯ ಸಂತಾಪ.

Source: SO News | By Laxmi Tanaya | Published on 18th July 2023, 9:02 PM | State News | National News |

ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

 ಓಮನ್ ಚಾಂಡಿ ಅವರ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ  ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು. 

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು.  ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು. 

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು. 

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ. 

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...