ನಾಳೆ ದೆಹಲಿಗೆ ಸಿಎಂ ಬಿಎಸ್‍ವೈ; ಶುಕ್ರವಾರವೇ ಸಂಪುಟ ವಿಸ್ತರಣೆ?

Source: S O News Service | By Office Staff | Published on 28th January 2020, 8:28 PM | Coastal News |

ಕಾರವಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ದೆಹಲಿಗೆ ತೆರಳಲಿದ್ದು, ಜನವರಿ 31ರಂದು ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.
ವರಿಷ್ಠರ ಭೇಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ದೆಹಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಬುಧವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶಿವಮೊಗ್ಗದಿಂದ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದು, ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.
ತಾವು ಸಿದ್ಧಪಡಿಸಿರುವ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ವರಿಷ್ಠರ ಒಪ್ಪಿಗೆ ಪಡೆಯಲಿದ್ದು, ಇದೇ ವೇಳೆ ಖಾತೆ ಹಂಚಿಕೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಒಂದೇ ವೇಳೆ ದೆಹಲಿ ಭೇಟಿ ಸಾದ್ಯವಾಗದಿದ್ದರೆ, ದೂರವಾಣಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ.ನಡ್ಡಾ ಒಪ್ಪಿದಲ್ಲಿ ಶುಕ್ರವಾರವೇ ಸಂಪುಟ ವಿಸ್ತರಣೆಯಾಗಲಿದೆ. ಸಂಜೆ ಸಂಪುಟ ಸಭೆ ನಡೆಯಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಅಷ್ಟರೊಳಗೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಸದ್ಯಕ್ಕೆ ಸಂಪುಟ ವಿಸ್ತರಣೆ ಮಾತ್ರ ನಡೆಯಲಿದ್ದು ಪುನಾರಚನೆ ಮಾಡುವ ಸಾಧ್ಯತೆ ಇಲ್ಲವೆನ್ನಲಾಗಿದೆ. ಬಿಜೆಪಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಲು ಸಿಎಂ ಆದ್ಯತೆ ನೀಡಿದ್ದು, ಇದೇ ವೇಳೆ ಮೂಲ ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...