ಭಟ್ಕಳ: ರಾಮಕ್ಷತ್ರೀಯ ಸಮಾಜವನ್ನು ಒಬಿಸಿ ಗೆ ಸೇರಿಸಲು ಪ್ರಯತ್ನಿಸುವೆ-ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

Source: sonews | By Staff Correspondent | Published on 28th December 2019, 10:43 PM | Coastal News |

*ರಾಮ ಕ್ಷತ್ರಿಯ ಸಮಾಜದ ಬೃಹತ್ ಸಮಾವೇಶದಲ್ಲಿ ಮು.ಮಂ ಯಡಿಯೋರಪ್ಪ

ಇಂದು ಹೊನ್ನಾವರ ತಾಲ್ಲೂಕಿನ ಮಂಕಿಯಲ್ಲಿ ರಾಮ ಕ್ಷತ್ರಿಯ ಸಮಾಜದ ಬೃಹತ್ ಸಮಾವೇಶ ನಡೆಯಿತು.

ಈ ಸಮಾವೇಶದಲ್ಲಿ ರಾಜ್ಯದ ಮುಖ್ಯ ಮಂತ್ರಿ  ಬಿ,ಎಸ್, ಯಡಿಯೂರಪ್ಪ ರವರು ಭಾಗವಹಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ರಾಮಕ್ಷತ್ರೀಯ ಸಮಾಜವನ್ನು ಒಬಿಸಿ ಗೆ ಸೇರಿಸಲು ಪ್ರಯತ್ನಿಸುವೆ ಎಂದು  ಭರವಸೆ ನೀಡಿದರು.  ಅನಕ್ಷರತೆ ಬಡತನಕ್ಕೆ ಕಾರಣ. ಶಿಕ್ಷಣದಲ್ಲಿಹೆಣ್ಣುಮಕ್ಕಳಿಗೆ ಆದ್ಯತೆ ಕಡಿಮೆಯಾಗುತ್ತಿದೆ. ಅವರು ವಿದ್ಯಾವಂತರಾದರೆ ಹತ್ತಾರು ಜನರಿಗೆ ಉದ್ಯೋಗ ನೀಡಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಜೀವನಮಟ್ಟದಲ್ಲಿ ಸುಧಾರಣೆ ಹೊಂದಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. 

ಕಾರ್ಯಕ್ರಮದಲ್ಲಿ ಸೊಂದಾ ಸ್ವರ್ಣವಲ್ಲಿ ಶ್ರೀಗಳು ಸೇರಿದಂತೆ ರಾಜ್ಯ ವಿಧಾನಸಭೆಯ ಸ್ಪೀಕರ್  ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತ ಕುಮಾರ್ ಹೆಗಡೆ, ಕಾರವಾರ ಅಂಕೋಲ ಕ್ಷೇತ್ರದ ಶಾಸಕಿ ರೂಪಾಲಿ ಎಸ್ ನಾಯ್ಕ, ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಭಟ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಅನೇಕ ಬಿಜೆಪಿಯ ಹಾಗೂ ರಾಮ ಕ್ಷತ್ರಿಯ ಸಮಾಜದ ಮುಖಂಡರು, ಸಮಾಜ ಬಾಂಧವರು, ಉಪಸ್ಥಿತರಿದ್ದರು ಮತ್ತು ಸಹಸ್ರಾರು ಸಂಖ್ಯೆಯಲ್ಲಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read These Next

ಮಾಜಿ ಶಾಸಕ ಮಾಂಕಾಳರ ನೆರವಿನಿಂದ ಭಟ್ಕಳದಿಂದ ಓಡಿಸ್ಸಾ ಕ್ಕೆ ಪ್ರಯಾಣ ಬೆಳೆಸಿದ 70 ಮೀನುಗಾರರು

ಭಟ್ಕಳ: ಸೇವಾ ಸಿಂಧು ಆ್ಯಫ್‍ನಲ್ಲಿ ಹೆಸರು ನೊಂದಾಯಿಸಿ ತಮ್ಮ ರಾಜ್ಯಕ್ಕೆ ಮರಳು  ಕಾಯುತ್ತಿದ್ದ ಒಡಿಸ್ಸಾದ 70 ಮೀನುಗಾರರು ಸೋಮವಾರದಂದು ...