ಕ್ರೈಂ ಮತ್ತು ಭ್ರಷ್ಟಾಚಾರ ಕೊನೆಗಾಣಿಸಲು ಯಾವುದೇ ಕ್ರಮಕ್ಕೂ ಹಿಂಜರಿಯುವುದಿಲ್ಲ: ಸಿಎಂ ಯೋಗಿ ಖಡಕ್​ ಮಾತು

Source: PTI | Published on 12th July 2020, 12:29 AM | National News | Don't Miss |

 


ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೊದಲಿನಿಂದಲೂ ತಮ್ಮ ರೆಬಲ್ ಸ್ವಭಾವದಿಂದಲೇ ಖ್ಯಾತರಾಗಿದ್ದಾರೆ. ನಿನ್ನೆ ವಿಕಾಸ್ ದುಬೆಯ ಎನ್​ಕೌಂಟರ್​ ಆದ ಮೇಲಂತೂ ಮತ್ತೆ ಯೋಗಿ ಜೀ ಸುದ್ದಿಯಲ್ಲಿದ್ದಾರೆ. ಪ್ರತಿಪಕ್ಷಗಳ ಹಲವು ಮುಖಂಡರು ಯೋಗಿ ಆದಿತ್ಯನಾಥ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಯೋಗಿ ಆದಿತ್ಯನಾಥ್​ ಅವರು, ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕ್ರೈಂಗಳನ್ನು ಕೊನೆಗಾಣಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ದಾರೆ.
ಭಷ್ಟಾಚಾರ ಮತ್ತು ಅಪರಾಧಗಳನ್ನು ಒಂದು ಸ್ವಲ್ಪವೂ ಸಹಿಸಿಕೊಳ್ಳುವುದಿಲ್ಲ. ಉತ್ತರ ಪ್ರದೇಶದಲ್ಲಿರುವ 200 ಮಿಲಿಯನ್​ ಜನರ ಸಂರಕ್ಷಣೆ ನಮ್ಮ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆ; ಇಂದು 2 ಸಾವಿರಕ್ಕೂ ಹೆಚ್ಚು ಕೇಸ್​ಗಳು
ಹಾಗೇ ಲಾಕ್​ಡೌನ್​ ಸಂದರ್ಭದಲ್ಲಿ ರಾಜ್ಯಕ್ಕೆ ವಾಪಸ್​ ಬಂದ ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್​ ಅವರು, ಕೊವಿಡ್-19 ಸಾಂಕ್ರಾಮಿಕ ರೋಗ ಬಂದು ಲಾಕ್​ಡೌನ್ ಆದ ಬಳಿಕ ಸುಮಾರು 4 ಮಿಲಿಯನ್​ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ವಲಸೆ ಕಾರ್ಮಿಕರಿಗೂ ಕೆಲಸ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಅಷ್ಟೇ ಅಲ್ಲ, ಮೊದಲು ಇದ್ದಲ್ಲಿಗೇ ವಾಪಸ್​ ಹೋಗಿ ಕೆಲಸ ಮಾಡುತ್ತೇವೆ ಎಂದು ಇಚ್ಛೆ ಪಡುವ ಕಾರ್ಮಿಕರಿಗೆ ಅದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. 

Read These Next

ನಾಗರಿಕ ಸೇವೆಗಳ ತರಬೇತಿಗಾಗಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ                                                 

ಕಾರವಾರ : PUE/ICSE/CBSE   ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ನಡೆಸಿರುವ 2ನೇ ಪಿ.ಯು.ಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ಕಲಾ, ...

ಸಾಮಾಜಿಕ ಅಂತರದೊಂದಿಗೆ 74ನೇ ಸ್ವಾತಂತ್ರ್ಯೋತ್ಸವ: ಡಿಸಿ                                                 

ಕಾರವಾರ : ಬರುವ ಅಗಸ್ಟ್ 15ರಂದು ನಡೆಯುವ 74ನೇ ಸ್ವಾತಂತ್ರ್ಯೋತ್ಸವವನ್ನು ಸಾಮಾಜಿಕ ಅಂತರ ಸ್ವಾನಿಟೈಸರ್, ಮಾಸ್ಕ್‍ಗಳ ಬಳಕೆಯಂತಹ ...