ಕಾರವಾರದ ಮನೋಜ್ ಬಾಡ್ಕರ್ ಕೋಸ್ಟ್ ಗಾರ್ಡ್ ಕಮಾಂಡರ್.

Source: SO News | By Laxmi Tanaya | Published on 13th September 2022, 7:17 PM | National News |

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರ ಮೂಲದ ಮನೋಜ್ ಬಾಡ್ಕರ್ ಇಂಡಿಯನ್  ಕೋಸ್ಟ್ ಗಾರ್ಡ್ ನ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

 ಮುಂಬೈನಲ್ಲಿ ನಡೆದ ಗೌರವ ವಂದನೆ ಕಾರ್ಯ ಕ್ರಮದಲ್ಲಿ ಇನ್ಸ್‌ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರು  ಪಶ್ಚಿಮ ವಲಯದ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡರು. ಕೇರಳ, ಮಹಾರಾಷ್ಟ್ರ, ಗೋವಾ, ಲಕ್ಷದ್ವೀಪ ದ್ವೀಪ ಮತ್ತು ಕರ್ನಾಟಕ ಪಶ್ಚಿಮ ಪದೇಶ ವ್ಯಾಪ್ತಿಯಲ್ಲಿ ಬರಲಿದ್ದು, ಈ ವ್ಯಾಪ್ತಿಗೆ ಈಗ ಮನೋಜ್ ಬಾಡ್ಕರ್ ಅವರು ಮುಖ್ಯಸ್ಥರಾಗಿದ್ದಾರೆ.

ಕಾರವಾರ ಮೂಲದ  ಮನೋಜ್ ಅವರು ಕಾರವಾರದ ಸೇಂಟ್ ಜೋಸೆಫ್ ಹೈಸ್ಕೂಲ್ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು.

ಈ ಹಿಂದೆ ಅವರು  ಕೋಸ್ಟ್ ಗಾರ್ಡ್ ನ ಕರ್ನಾಟಕ ಮತ್ತು ಗೋವಾ ರಾಜ್ಯದ ಮುಖ್ಯಸ್ಥರಾಗಿದ್ದರು. 2013ರಿಂದ 2018ರವರೆಗೆ ದೆಹಲಿಯ ಕೋಸ್ಟ್ಗಾರ್ಡ್ ನೇಮಕಾತಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡ ಅವರು, 2018ರಲ್ಲಿ ಇನ್ಸೆಕ್ಟರ್ ಜನರಲ್ ಶ್ರೇಣಿಗೆ ಬಡ್ತಿ ಪಡೆದಿದ್ದರು. ಅವರ 30 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಕೋಸ್ಟ್ ಗಾರ್ಡ್ ಹಡಗುಗಳು ಮತ್ತು ನಿಲ್ದಾಣಗಳಿಗೆ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸಿರುವುದು ವಿಶೇಷವಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...