ಸೋಶಿಯಲ್​ ಮೀಡಿಯಾಗಳಲ್ಲಿ ಸುಳ್ಳು ಪ್ರಚಾರಕ್ಕೆ ಚುನಾವಣೆ ಆಯೋಗ ಕೊಕ್ಕೆ

Source: so news | By MV Bhatkal | Published on 11th March 2019, 12:35 AM | National News | Don't Miss |

ನವದೆಹಲಿ: ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಸುಲಭವಾಗಿ ಸೆಳೆದು, ಮತ ಗಿಟ್ಟಿಸಿಕೊಳ್ಳಬಹುದು ಎಂದು ಯೋಚಿಸಿದವರಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ. ಸೋಶಿಯಲ್​ ಮೀಡಿಯಾ ಮೂಲಕ ಮಾಡುವ ಪ್ರಚಾರಕ್ಕೆ, ಸುಳ್ಳು ಸುದ್ದಿಗಳಿಗೆ ಆಯೋಗ ಕೊಕ್ಕೆ ಹಾಕಿದೆ.

ಹೌದು, ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಮ್ಮ ನಾಮಪತ್ರದಲ್ಲಿ ಕಡ್ಡಾಯವಾಗಿ ತಾವು ಹೊಂದಿರುವ ಸೋಶಿಯಲ್​ ಮೀಡಿಯಾ ಖಾತೆಗಳ ಮಾಹಿತಿ ನೀಡಬೇಕು. ಜೊತೆಗೆ ತನ್ಮೂಲಕ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ಎಲ್ಲಾ ಸೋಶಿಯಲ್​ ಮೀಡಿಯಾಗಳು ಕಡ್ಡಾಯವಾಗಿ ಅಧಿಕಾರಿಗಳನ್ನು ನೇಮಿಸಿ, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ಸುನೀಲ್​ ಅರೋರ ಕಟ್ಟಾಜ್ಞೆ ಹೊರಡಿಸಿದ್ದಾರೆ. 
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಮುನ್ನ ಅವರು ಚುನಾವಣಾ ಸಿದ್ಧತೆಗಳು ಹಾಗೂ ಆಯೋಗ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಈ ವೇಳೆ ಸೋಶಿಯಲ್​ ಮೀಡಿಯಾ ಮೂಲಕ ಜನರನ್ನು ಸೆಳೆಯುವ ತಂತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. 
ಇಂಟರ್​ನೆಟ್​ ಅಂಡ್​ ಮೊಬೈಲ್​ ಅಸೋಸಿಯೇಷನ್​ ಆಫ್​ ಇಂಡಿಯಾವು ಚುನಾವಣಾ ಆಯೋಗದೊಂದಿಗೆ ಸಮಾಲೋಚನೆ ನಡೆಸಿ ಆನ್​ಲೈನ್​ ಸಂಪರ್ಕ ಸೇವೆಗಳ ಸಂಬಂಧ ನೀತಿ ಸಂಹಿತೆಯನ್ನು ರೂಪಿಸುತ್ತಿದೆ ಎಂದು ಹೇಳಿದರು. ಇದರಂತೆ ಸೋಶಿಯಲ್​ ಮೀಡಿಯಾಗಳಲ್ಲಿ ರಾಜಕೀಯ ಜಾಹೀರಾತಿಗೆ ಪೂರ್ವ ದೃಢೀಕರಣ ಪಡೆಯುವುದು ಅಗತ್ಯವಿರುತ್ತದೆ. 
ಗೂಗಲ್​, ಫೇಸ್​ಬುಕ್ , ಟ್ವಿಟ್ಟರ್​ ಹಾಗೂ ಯೂಟೂಬ್​ಗಳು ರಾಜಕೀಯ ಪಕ್ಷಗಳಿಂದ ಬರುವ ಜಾಹೀರಾತುಗಳನ್ನು ಪರಿಶೀಲನೆಗೆ ಒಳಪಡಿಸಬೇಕು. ಸೋಶಿಯಲ್​ ಮೀಡಿಯಾಗಳಿಗಾಗಿ ಖರ್ಚು ಮಾಡುವ ಮೊತ್ತವೇ ಅಭ್ಯರ್ಥಿ ಇಡೀ ಚುನಾವಣೆಗಾಗಿ ಖರ್ಚು ಮಾಡುವ ಮೊತ್ತದಲ್ಲಿ ಸೇರಿರುತ್ತದೆ ಎಂದರು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...