ಕಾಮನ್‌ವೆಲ್ತ್ ಗೇಮ್ಸ್-2022: ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು

Source: ANI | By MV Bhatkal | Published on 31st July 2022, 12:12 AM | National News |

ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022 ಗುರುವಾರದಿಂದ ಪ್ರಾರಂಭವಾಗಿದ್ದು, ಪದಕ ಬೇಟೆ ಮುಂದುವರೆಸಿದ ಭಾರತ ಶನಿವಾರ ವೇಟ್‌ಲಿಫ್ಟಿಂಗ್ ನಲ್ಲಿ ಚಿನ್ನ ಸೇರಿದಂತೆ ಒಂದೇ ದಿನ ಮೂರು ಪದಕಗಳನ್ನು ಪಡೆದುಕೊಂಡಿದೆ. 

ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಇಂದು ವೇಟ್‌ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಇಂದು ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ.
ವೇಟ್ ಲಿಫ್ಟರ್ ಸಂಕೇತ್ ಮಹದೇವ್ ಸಾಗರ್ ಅವರು 55 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.  61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...