ರೆಡ್ ಕ್ರಾಸ್ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ: ಜಿಲ್ಲಾಧಿಕಾರಿ

Source: so news | By MV Bhatkal | Published on 10th July 2019, 11:18 PM | State News | Don't Miss |

ಹಾಸನ:ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯು ಎಲ್ಲಾ ಸಾಮಾಜಿಕ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರೆಡ್ ಕ್ರಾಸ್ ಸಂಸ್ಥೆ ಪದಾಧಿಕಾರಿಗಳೊಂದಿಗೆ ಸಂಸ್ಥೆಯ ಚಟುವಟಿಕೆಗಳ ಕುರಿತು ಅನೌಪಚಾರಿಕ ಚರ್ಚೆ ನಡೆಸಿದ ಅವರು ಜಿಲ್ಲೆಯಲ್ಲಿ ರೆಡ್ ಕ್ರಾಸ್‍ನ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಸಾಮಾಜಿಕ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದ್ದು ಜಲಶಕ್ತಿ ಅಭಿಯಾನವು ಆಂದೋಲನದ ರೀತಿ ಕಾರ್ಯರೂಪಕ್ಕೆ ಬರಬೇಕು ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು ಜಲ ಸಂರಕ್ಷಣೆ ಬಗ್ಗೆ ಸಾರ್ವಜನಿರಲ್ಲಿ ಅರಿವು ಮೂಡಿಸಲು ರೆಡ್ ಕ್ರಾಸ್ ಹಾಗೂ ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಂಡು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹನಿ-ಹನಿ ನೀರಿನ ಮಹತ್ವದ ಬಗ್ಗೆ ಹಾಗೂ ನಿರುಪಯುಕ್ತ ನೀರನ್ನೂ ಮರು ಬಳಕೆ ವಿಧಾನಗಳ ಬಗ್ಗೆ ಅರಿವು ಮೂಡಿಸಬೇಕು ಇದರಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇದವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದ್ದೆ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ನಿಷೇದ ಹೇರಲಾಗಿದೆ ಜೊತೆಗೆ ಹೂ ಗುಚ್ಚಗಳ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸದಂತೆ ತಿಳಿಸಲಾಗಿದ್ದು ಆದೇಶ ಉಲ್ಲಂಘಿಸಿಸುವವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಪಿ ಮೋಹನ್, ಕಾರ್ಯದರ್ಶಿ ಅನುಗನಾಳ್‍ಕೃಷ್ಣಮೂರ್ತಿ, ಹಾಗೂ ಸಂಸ್ಥೆಯ ಪ್ರಮುಖರಾದ ಹಿರಿಯ ಸ್ವತಂತ್ರ ಹೋರಾಟಗಾರರಾದ ಹೆಚ್.ಎಂ ಶಿವಣ್ಣ, ಜನತಾ ಮಾಧ್ಯಮ ಪತ್ರಿಕೆ ವ್ಯವಸ್ಥಾಪಕ ಸಂಸ್ಥಾಪಕರು ಹಾಗೂ ಸಾಮಾಜಿಕ ಹೋರಾಟಗಾರರಾದ ಮಂಜುನಾಥ್ ದತ್ತ, ಅಂಜದ್ ಖಾನ್, ಎಸ್.ಎಸ್ ಪಾಷ, ಶಬೀರ್ ಅಹಮದ್, ನಿರ್ಮಲ, ಚಂದನ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...